ಧಾರವಾಡ: ಇಲ್ಲಿನ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿಡಿಹೆಚ್)ಯಲ್ಲಿ ಖಾಲಿ ಇರುವ ಆಡಳಿತ ಮತ್ತು ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ರಿಜಿಸ್ಟ್ರಾರ್, ಜೂನಿಯರ್ ಸೂಪರಿಂಟೆಂಡೆಂಟ್, ಕಿರಿಯ ಸಹಾಯಕ ಹಾಗೂ ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್ ಸೇರಿದಂತೆ ಒಟ್ಟು 12 ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಜು.13ರೊಳಗೆ ಅರ್ಜಿ ಸಲ್ಲಿಸಲು ಐಐಟಿಡಿಹೆಚ್ ಅಧಿಕೃತ ಜಾಲತಾಣ https://www.iitdh.ac.in/announcementಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜೂನ್ 11, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 13, 2026
- ಅರ್ಜಿ ಶುಲ್ಕ ಪಾವತಿಸಲು ದಿನಾಂಕ – ಜುಲೈ 13, 2026
ಖಾಲಿ ಇರುವ ಹುದ್ದೆಗಳ ವಿವರ:
ಸಹಾಯಕ ರಿಜಿಸ್ಟ್ರಾರ್ 02
ಜೂನಿಯರ್ ಸೂಪರಿಂಟೆಂಡೆಂಟ್ 03
ಕಿರಿಯ ಸಹಾಯಕ 02
ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್(ಸಿಎಸ್ಇ) 01
ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್(ಸಿಸಿಎಸ್) 01
ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್(ರಾಸಾಯನಿಕ ಎಂಜಿನಿಯರಿಂಗ್) 01
ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್(ಸಿವಿಲ್) 01
ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್(ಬಿಎಸ್ಬಿಇ) 01
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಗಳಿಂದ ಕನಿಷ್ಠ 55% ಅಂಕಗಳೊಂದಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೊಮಾ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿ.
ವಯೋಮಿತಿ:
• ಸಹಾಯಕ ರಿಜಿಸ್ಟ್ರಾರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 42 ವರ್ಷಗಳು
• ಜೂನಿಯರ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 34 ವರ್ಷಗಳು
• ಕಿರಿಯ ಸಹಾಯಕ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
• ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 34 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ, ಪ.ಪಂಗಡ ಹಾಗೂ ಐಐಟಿ ಧಾರವಾಡದ ಪ್ರಸ್ತುತ ನಿಯಮಿತ ಉದ್ಯೋಗಿ ಅಭ್ಯರ್ಥಿಗಳಿಗೆ 05 ವರ್ಷಗಳು, ಇಎಸ್ಎಂ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಮಾನದಂಡಗಳ ಪ್ರಕಾರ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ-I
- ಲಿಖಿತ ಪರೀಕ್ಷೆ-II
- ಸಂದರ್ಶನ
- ದಾಖಲಾತಿ ಪರಿಶೀಲನೆ
- ಅಂತಿಮ ಆಯ್ಕೆ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 7ನೇ ಸಿಪಿಸಿ ಲೆವೆಲ್ 03, 06, ಹಾಗೂ 10ನೇ ವೇತನ ಮಟ್ಟದ ಅನುಸಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ.
• ಪ.ಜಾತಿ, ಪ.ಪಂಗಡ, ಮಾಜಿ ಸೈನಿಕರು, ಪಿಡಬ್ಲ್ಯೂಬಿಡಿ, ಮಹಿಳೆಯರು ಹಾಗೂ ಸಂಸ್ಥೆಯ ಪ್ರಸ್ತುತ ನಿಯಮಿತ ಉದ್ಯೋಗಿ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು IITDH ಅಧಿಕೃತ ಜಾಲತಾಣ https://www.iitdh.ac.in/announcement ಕ್ಕೆ ಭೇಟಿ ನೀಡಿ.
• Advertisement No. IITDh/Admin/SR/46/2026-27 dated 11 June 2026 for recruitment to Permanent Administrative and Technical Posts ಶೀರ್ಷಿಕೆಯ ಕೆಳಗೆ ನೀಡಲಾಗಿರುವ – “ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಆಯ್ಕೆಯನ್ನು ಕ್ಲಿಕ್ಕಿಸಿ.
• ನಂತರ ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಖಾತೆ ಇಲ್ಲದಿದ್ದರೆ ಸೈನ್ ಅಪ್ ಮಾಡಿ.
• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆರಿಸಿ.
• ಅರ್ಜಿಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.iitdh.ac.in |
| More Updates | KarnatakaHelp.in |


