ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ದೆಹಲಿಯು ಅಧಿಕೃತವಾಗಿ ಜಾಯಿಂಟ್ ಅಡ್ಮಿಷನ್ ಟೆಸ್ಟ್ ಫಾರ್ ಮಾಸ್ಟರ್ಸ್ (JAM) 2025 ರ ಜಂಟಿ ಪ್ರವೇಶ ಪರೀಕ್ಷೆಗಾಗಿ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 03 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು IIT JAM 2025 ನೊಂದಣಿಗಾಗಿ ಅಧಿಕೃತ ವೆಬ್‌ಸೈಟ್‌ಗೆ jam2025.iitd.ac.in ನ ಭೇಟಿ ನೀಡಬಹುದು.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಈ ಪರೀಕ್ಷೆಯನ್ನು ನಡೆಸುತ್ತಿದೆ. ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳಾದ M.Sc., M.Sc. (Tech), M.S Research, M.Sc.-M.Tech. Dual Degree, Joint M.Sc.- Ph.D., M.Sc. – Ph.D. Dual Degree ಗೆ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಮೂಲಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯು ಏಳು ವಿಷಯಗಳನ್ನು ಒಳಗೊಂಡಿರುತ್ತದೆ. ಪದವಿಯನ್ನು ಪಡೆದಿರುವ ಅಥವಾ ಅವರ ಅಂತಿಮ ವರ್ಷದ ಅಧ್ಯಯನದಲ್ಲಿರುವ ಆಕಾಂಕ್ಷಿಗಳು IIT JAM 2025 ಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರಿಗೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಭಾರತೀಯ ಪದವಿ ಹೊಂದಿರುವ ವಿದೇಶಿ ಪ್ರಜೆಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ.