Income Tax Department Young Professional Notification 2025
ಕರ್ನಾಟಕ ಮತ್ತು ಗೋವಾ ಪ್ರದೇಶದ ಆದಾಯ ತೆರಿಗೆ ಇಲಾಖೆಯು ಕೇಂದ್ರ ನೇರ ತೆರಿಗೆ ಮಂಡಳಿಯ (CBDT) ಯುವ ವೃತ್ತಿಪರ ಯೋಜನೆಯಡಿ ಯುವ ವೃತ್ತಿಪರರ ಭರ್ತಿಗಾಗಿ ಬೆಂಗಳೂರು ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರ ಕಚೇರಿ ಅಧಿಸೂಚನೆ ಹೊರಡಿಸಿದೆ.
ಒಟ್ಟು 03 ಯುವ ವೃತ್ತಿಪರ(Young Professional) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಧಿಕೃತ ಜಾಲತಾಣದಲ್ಲಿ ಅರ್ಜಿ ನಮೂನೆಯನ್ನು ಪಡೆದು ತುಂಬಿ ಇ-ಮೇಲ್ ವಿಳಾಸ benqaluru.vos@incometax.qov.inಕ್ಕೆ ಜ.08 ರೊಳಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಆಯ್ಕೆ ವಿಧಾನ:
ಶಾರ್ಟ್ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ 60,000ರೂ. ವರೆಗೆ ಮಾಹೆಯಾನ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಮೊದಲಿಗೆ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆ ಕರ್ನಾಟಕ ಮತ್ತು ಗೋವಾ ವಲಯ ಅಧಿಕೃತ ಜಾಲತಾಣ https://www.incometaxkarnatakagoa.gov.in/ ಕ್ಕೆ ಭೇಟಿ ನೀಡಿ.
• ನಂತರ ಮುಖಪುಟದ ಇತ್ತೀಚಿನ ನವೀಕರಣ ವಿಭಾಗದಲ್ಲಿ ನೀಡಲಾಗಿರುವ “CBDT ಯ ಯುವ ವೃತ್ತಿಪರ ಯೋಜನೆಯಡಿಯಲ್ಲಿ ಯುವ ವೃತ್ತಿಪರರ ಸೇವೆಗಳಿಗೆ ಜಾಹೀರಾತು ಆಹ್ವಾನ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಉದ್ಯೋಗ ಜಾಹೀರಾತು ಹಾಗೂ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.
• ಅರ್ಜಿ ಮತ್ತು ಪೂರಕ ದಾಖಲೆಗಳ ಸ್ವಯಂ-ದೃಢೀಕರಿಸಿದ ಪ್ರತಿಗಳನ್ನು ಸ್ಕ್ಯಾನ್ ಮಾಡಿ “YP ಗಾಗಿ ಅರ್ಜಿ (ಅಭ್ಯರ್ಥಿಯ ಹೆಸರು)” ಎಂಬ ವಿಷಯದೊಂದಿಗೆ ಈ ಕೆಳಗಿನ ಇಮೇಲ್ ವಿಳಾಸಕ್ಕೆ ಜನವರಿ 8ರೊಳಗೆ ತಲುಪುವಂತೆ ಕಳುಹಿಸಬೇಕು.