ಭಾರತೀಯ ಅಂಚೆ ಇಲಾಖೆಯು 2024ರ ಗ್ರಾಮೀಣ ಡಾಕ್ ಸೇವಕ (India Post GDS 1st Merit List 2024) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ನೇಮಕಾತಿ ಪ್ರಕ್ರಿಯೆಯ ಮೊದಲ ಮೆರಿಟ್ ಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿಯಲ್ಲಿ ದೇಶದಾದ್ಯಂತ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಆಗಸ್ಟ್ 5 ರವರೆಗೆ ಅವಕಾಶ ನೀಡಲಾಗಿತ್ತು. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು, ಮೆರಿಟ್ ಪಟ್ಟಿಗಾಗಿ ಕಾಯುತ್ತಿದ್ದಾರೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಹೆಚ್ಚು ಅಂಕ ಪಡೆದಿರುವ ಅಭ್ಯರ್ಥಿಗಳನ್ನು ಗುರುತಿಸಿ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಆಗಸ್ಟ್ ನಾಲ್ಕನೇ ವಾರದ ಅವಧಿಯಲ್ಲಿ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಅವರ ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ವಿಳಾಸದಲ್ಲಿ ಪಠ್ಯ ಸಂದೇಶದ ಮೂಲಕ ಭೌತಿಕ ಪರಿಶೀಲನೆ ಮತ್ತು ಫಲಿತಾಂಶಗಳ ಬಗ್ಗೆ ತಿಳಿಸಲಾಗುತ್ತದೆ. ನಂತರ ಆಯ್ಕೆಯಾದ ಅಭ್ಯರ್ಥಿಗಳು ಅಂಚೆ ಇಲಾಖೆಯು ನಿಗದಿಪಡಿಸುವ ದಿನಾಂಕದಂದು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ.
ಅಂಚೆ ಇಲಾಖೆಯ GDS ಹುದ್ದೆಗಳಿಗೆ ಸಂಬಂಧಿಸಿದ ಮೊದಲ ಮೆರಿಟ್ ಪಟ್ಟಿಯನ್ನು ವೀಕ್ಷಿಸಲು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ indiapostgdsonline.gov.in ಭೇಟಿ ನೀಡಬೇಕು. ಈ ಲೇಖನದಲ್ಲಿ India Post GDS Result 2024 ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು, ಗಮನವಿಟ್ಟು ಓದಿರಿ.