Army 66th SSC Entry: ದೇಶದ ಸೇನೆಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ, ಅಪ್ಲೈ ಮಾಡಿ

ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತಾ ಮಾನದಂಡಗಳೇನು?, ಕೊನೆ ದಿನಾಂಕವೇನು? ಸಂಪೂರ್ಣ ಸವಿವರ ಇಲ್ಲಿದೆ

Published on:

Updated On:

66ನೇ ಅಲ್ಪಕಾಲೀನ ಸೇವಾ (ಎಸ್ಎಸ್ಸಿ) (ತಾಂತ್ರಿಕ) ಪ್ರವೇಶಾತಿ ಮೂಲಕ ಭಾರತೀಯ ಸೇನೆಗೆ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಅವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಅಧಿಕೃತ ವೆಬ್ಸೈಟ್ https://joinindianarmy.nic.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 23, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಆಗಸ್ಟ್ 21, 2025

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಂಬಂಧಿತ ಕ್ಷೇತ್ರದಲ್ಲಿ ಇಂಜಿನಿಯರಿಂಗ್ ಪದವಿ(B.E. / B. Tech in any Engineering stream)ಪೂರ್ಣಗೊಳಿಸಿರಬೇಕು.

ವಯೋಮಿತಿ:

01-04-2026 ರಂತೆ;

  • ಕನಿಷ್ಠ ಮಿತಿ – 20 ವರ್ಷಗಳು.
  • ಗರಿಷ್ಠ ಮಿತಿ – 27 ವರ್ಷಗಳು.

ತರಬೇತಿ ಭತ್ಯೆ:

ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಮಾಸಿಕ 56,100ರೂ. ವರೆಗೆ ತರಬೇತಿ ಭತ್ಯೆ ಪಾವತಿಸಲಾಗುತ್ತದೆ.

ಆಯ್ಕೆ ವಿಧಾನ:

  • ಅರ್ಜಿಗಳ ಪರಿಶೀಲನೆ
  • ಎಸ್ಎಸ್‌ಬಿ
  • ವೈದ್ಯಕೀಯ ಪರೀಕ್ಷೆ
  • ಅರ್ಹತಾ ಪಟ್ಟಿ

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

How to Apply for Indian Army 66th SSC Notification 2025

ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ;

  • ಭಾರತೀಯ ಸೇನೆಯ ವೆಬ್ಸೈಟ್ https://joinindianarmy.nic.in/Authentication.aspx ಗೆ ಭೇಟಿ ನೀಡಿ.
  • ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
  • ಭಾರತೀಯ ಸೇನೆ ಟೆಕ್ ನೇಮಕಾತಿ (ಮಹಿಳೆಯರು) 2026 ಅರ್ಜಿ ನಮೂನೆ ಹುಡುಕಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkNew User || Login Now
Official Websitejoinindianarmy.nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

7 thoughts on “Army 66th SSC Entry: ದೇಶದ ಸೇನೆಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ, ಅಪ್ಲೈ ಮಾಡಿ”

Leave a Comment