ಭಾರತೀಯ ಸೇನೆಯು ಕಮಿಷನ್ಡ್ ಆಫೀಸರ್ ಸ್ತರದಲ್ಲಿ 10+2 ಟಿಇಎಸ್-54 (Technical Entry Scheme)ಕೋರ್ಸ್‌ಗಾಗಿ (ಜನವರಿ 2026) ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಭಾರತೀಯ ಸೇನೆಯಲ್ಲಿ (Indian army) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಟಿಇಎಸ್-54 ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ joinindianarmy.nic.inಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – Indian Army Course Name– TES-54 Total Vacancy – 90 Application Process – online Job Location – All India
TES-54 ಕೋರ್ಸ್‌ಗೆ JEE (ಮುಖ್ಯ) 2025 ರಲ್ಲಿ ಕಾಣಿಸಿಕೊಳ್ಳುವುದು ಕಡ್ಡಾಯವಾಗಿದೆ. ಇದು 12 ನೇ ತರಗತಿಯಲ್ಲಿ PCM (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ವಿಷಯದಲ್ಲಿ ಕನಿಷ್ಠ 60% ಅಂಕಗಳ ಮಾನದಂಡಗಳ ಜೊತೆಗೆ ಇರುತ್ತದೆ.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 16 1/2 ವರ್ಷಗಳು. • ಗರಿಷ್ಠ ವಯಸ್ಸಿನ ಮಿತಿ – 19 1/2 ವರ್ಷಗಳು.
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಅರ್ಜಿ > ಶಾರ್ಟ್‌ಲಿಸ್ಟಿಂಗ್ > SSB ಪರೀಕ್ಷೆ> ವೈದ್ಯಕೀಯ ಪರೀಕ್ಷೆ > ಮೆರಿಟ್ ಪಟ್ಟಿ > ಸೇರ್ಪಡೆ ಪತ್ರ(Joining Letter)
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ನಿಗದಿಪಡಿಸಿರುಯುವುದಿಲ್ಲ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ https://joinindianarmy.nic.in/Authentication.aspx ಗೆ ಭೇಟಿ ನೀಡಿ.
ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ಅರ್ಜಿ ಶುಲ್ಕ ಪಾವತಿ ಮಾಡಿ.
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.