ಭಾರತೀಯ ಬ್ಯಾಂಕ್ 2024-25 ಸಾಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಭಾರತದ ಎಲ್ಲ ರಾಜ್ಯಗಳಲ್ಲೂ ಸುಮಾರು 1500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 10 ರಿಂದ ಜುಲೈ 31, 2024 ರವರೆಗೆ ಭಾರತೀಯ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ https://www.indianbank.in ಭೇಟಿ ನೀಡಿ ಅಗತ್ಯ ತಕಲಾತಿಗಳು ಮತ್ತು ಅರ್ಜಿ ಶುಲ್ಕಗಳನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೇ ಫಂಡ್ ನೀಡಲಾಗುತ್ತದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಗಮನವಿಟ್ಟು ಓದಿರಿ.