ಸಾರ್ವಜನಿಕ ವಲಯದ ಬ್ಯಾಂಕಿನಲ್ಲೊಂದಾದ ಇಂಡಿಯನ್ ಬ್ಯಾಂಕ್ ವಿವಿಧ ವೃಂದದ ಸ್ಪೆಷಲಿಸ್ಟ್ ಆಫೀಸರ್(SO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಒಟ್ಟು 350 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.28ರವರೆಗೆ ಕಾಲಾವಕಾಶವನ್ನು ನೀಡಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು IBPS ಅಧಿಕೃತ ವೆಬ್ಸೈಟ್ https://ibpsreg.ibps.in/ibsofeb26/ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಏಪ್ರಿಲ್ 08, 2026
- ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 28, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಆಯಾ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ವಿಭಾಗದಲ್ಲಿ ಪದವಿ, ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಬಿ.ಇ/ ಬಿ.ಟೆಕ್, ಸಿ.ಎ/ಸಿ.ಎಫ್.ಎ, ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಸದಸ್ಯ, ಫೈನಾನ್ಸ್ ವಿಷಯದಲ್ಲಿ ಪಿಜಿಡಿಬಿಎ/ಪಿಜಿಡಿಬಿಎಂ, ಎಂಬಿಎ ದಂತಹ ತತ್ಸಮಾನ ಅರ್ಹತೆಗಳನ್ನು ಹೊಂದಿರಬೇಕು.
• ಹೆಚ್ಚಿನ ಹುದ್ದೆಗಳ ಹಾಗೂ ವಿದ್ಯಾರ್ಹತೆಯ ವಿವರಗಳಿಗಾಗಿ ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು.
ವಯೋಮಿತಿ:
ಕನಿಷ್ಠ ಮಿತಿ – 22-27 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ ಬದಲಾಗುತ್ತದೆ)
ಗರಿಷ್ಠ ವಯಸ್ಸಿನ ಮಿತಿ – 31-45 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ ಬದಲಾಗುತ್ತದೆ)
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು.
ಆಯ್ಕೆ ವಿಧಾನ:
- ಅರ್ಹ ಅರ್ಜಿಗಳ ಶಾರ್ಟ್‌ಲಿಸ್ಟ್
- ಲಿಖಿತ/ಆನ್‌ಲೈನ್ ಪರೀಕ್ಷೆ
- ಸಂದರ್ಶನ
ಸಂಬಳ:
ಸ್ಕೇಲ್ – I ಹುದ್ದೆಗಳಿಗೆ – ₹48480-₹67160/-
ಸ್ಕೇಲ್ – II ಹುದ್ದೆಗಳಿಗೆ – ₹64820-₹93960/-
ಸ್ಕೇಲ್ – III ಹುದ್ದೆಗಳಿಗೆ – ₹85920-₹105280/-
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ₹175
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ₹1000
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು IBPS ಅಧಿಕೃತ ವೆಬ್ಸೈಟ್ https://ibpsreg.ibps.in/ibsofeb26/ಗೆ ಭೇಟಿ ನೀಡಿ.
• ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | indianbank.bank.in |
| More Updates | KarnatakaHelp.in |
Need job