ಭಾರತೀಯ ನೌಕಾಪಡೆಯು 2026ರ ಜುಲೈ ಮಾಹೆಯ 10+2 ಬಿ.ಟೆಕ್ ಕೆಡೆಟ್ ಪ್ರವೇಶ ಯೋಜನೆಯಡಿ ಕಮಿಷನ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಕೆ ಜ.03ರಿಂದ ಪ್ರಾರಂಭವಾಗಲಿದೆ.
ಕೇರಳದ ಎಜಿಮಲದ ಭಾರತೀಯ ನೌಕಾಪಡೆ ಅಕಾಡೆಮಿಯ ಕಾರ್ಯನಿರ್ವಾಹಕ ಮತ್ತು ತಾಂತ್ರಿಕ ಶಾಖೆಗೆ ಅವಿವಾಹಿತ 37 ಪುರುಷ ಅಭ್ಯರ್ಥಿಗಳನ್ನು ಹಾಗೂ 07 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 44 ಸ್ಥಾನಗಳನ್ನು ಶಾಶ್ವತ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತರು ಜ.19ರೊಳಗೆ ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ https://www.joinindiannavy.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ, ಹಿರಿಯ ಮಾಧ್ಯಮಿಕ ಪರೀಕ್ಷೆ (10+2 ಮಾದರಿ) ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಕನಿಷ್ಠ 70% ಒಟ್ಟು ಅಂಕಗಳೊಂದಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ (PCM) ವಿಷಯಗಳಲ್ಲಿ ಉತ್ತೀರ್ಣ ಮತ್ತು ಕನಿಷ್ಠ 50% ಅಂಕಗಳೊಂದಿಗೆ ಇಂಗ್ಲಿಷ್ ವಿಷಯದಲ್ಲಿ (ಹತ್ತನೇ ತರಗತಿ ಅಥವಾ ಹನ್ನೆರಡನೇ ತರಗತಿಯಲ್ಲಿ) ಉತ್ತೀರ್ಣರಾಗಿರಬೇಕು.
ಯಾರು ಅರ್ಜಿ ಸಲ್ಲಿಸಬಹುದು?
ಜೆಇಇ (ಮುಖ್ಯ)-2025ರ ಪರೀಕ್ಷೆಗೆ (ಬಿ.ಇ/ಬಿ. ಟೆಕ್) ಹಾಜರಾಗಿದ್ದ ಅಭ್ಯರ್ಥಿಗಳು ಅರ್ಹರು.
ವಯೋಮಿತಿ:
02 ಜನವರಿ 2007 ಮತ್ತು 01 ಜುಲೈ 2009 (ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಂಬಳ:
ಭಾರತೀಯ ನೌಕಾ ಅಕಾಡೆಮಿ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಹಾಗೂ ಭತ್ಯೆಗಳನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
• ಜೆಇಇ 2025ರ ರ್ಯಾಂಕ್ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ • SSB ಸಂದರ್ಶನ • ಮೆರಿಟ್ ಪಟ್ಟಿ • ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ https://www.joinindiannavy.gov.in/ಗೆ ಭೇಟಿ ನೀಡಿ.
• ನಂತರ ಅಧಿಕಾರಿಗಳು ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಜುಲೈ 26ರಂದು ನಡೆಯಲಿರುವ 10+12 ಬಿ.ಟೆಕ್ ಕೆಡೆಟ್ ಪ್ರವೇಶ ಕೋರ್ಸ್ಗೆ ಆನ್ಲೈನ್ ಅರ್ಜಿ ವಿಂಡೋ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ, ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.