ಒಟ್ಟು 1110 ನೌಕಾಪಡೆಯ ನಾಗರಿಕ(ವಿವಿಧ ಗ್ರೂಪ್ ‘ಬಿ ಎನ್‌ಜಿ’ ಮತ್ತು ಗ್ರೂಪ್ ‘ಸಿ’) ಹುದ್ದೆಗಳ ಭರ್ತಿಗಾಗಿ ಭಾರತೀಯ ನೌಕಾಪಡೆಯು ಅಧಿಸೂಚನೆ ಬಿಡುಗಡೆ ಮಾಡಿದೆ.
ಭಾರತೀಯ ನೌಕಾಪಡೆ ನಾಗರಿಕ ಪ್ರವೇಶ ಪರೀಕ್ಷೆ INCET-01/2025 – ವಿವಿಧ ಕಮಾಂಡ್‌ಗಳ ಆಡಳಿತ ನಿಯಂತ್ರಣ ಘಟಕಗಳಲ್ಲಿ ಖಾಲಿ ಇರುವ ನೌಕಾ ನಾಗರಿಕ ಸಿಬ್ಬಂದಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ವೆಬ್ಸೈಟ್ https://www.joinindiannavy.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 05-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -18-07-2025
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
12th, 10th, B.Sc, Diploma, ITI, Degree in related discipline.
ವಯೋಮಿತಿ:
ಕನಿಷ್ಠ ಮಿತಿ – 18 ರಿಂದ 20 ವರ್ಷಗಳು
ಗರಿಷ್ಠ ಮಿತಿ – 25 ರಿಂದ 45 ವರ್ಷಗಳು
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ತಿಳಿಸಲಾಗಿದ್ದು, ಅಭ್ಯರ್ಥಿಗಳು ತಪ್ಪದೆ ಅಧಿಸೂಚನೆಯನ್ನು ಓದಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ(Online Examination)
ದೈಹಿಕ ಪರೀಕ್ಷೆ (ಅನ್ವಯಿಸಿದರೆ)
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಯುಆರ್, ಇಡಬ್ಲ್ಯೂಎಸ್, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ – 295ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ, ಪಿಡಬ್ಲ್ಯೂಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for Indian Navy INCET-01 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ https://www.joinindiannavy.gov.inಗೆ ಭೇಟಿ ನೀಡಿ.
ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಭಾರತೀಯ ನೌಕಾಪಡೆ ನಾಗರಿಕ ಪ್ರವೇಶ ಪರೀಕ್ಷೆ INCET-01/2025 – ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.