ಕೇರಳದ ಎಜಿಮಲದಲ್ಲಿರುವ ಭಾರತೀಯ ನೌಕಾ ಅಕಾಡೆಮಿ (INA)ಯಲ್ಲಿ ಜನವರಿ 2026 ರಿಂದ ಪ್ರಾರಂಭವಾಗುವ ಕಿರು ಸೇವಾ ಆಯೋಗದ (SSC) ಮಾಹಿತಿ ತಂತ್ರಜ್ಞಾನ (IT) ಕಾರ್ಯನಿರ್ವಾಹಕ ಶಾಖೆಯಲ್ಲಿ ಒಟ್ಟು 15 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ https://www.joinindiannavy.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಆಗಸ್ಟ್ 02, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 17, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿ, 12ನೇ ತರಗತಿಯಲ್ಲಿ ಇಂಗ್ಲಿಷ್‌ನಲ್ಲಿ ಕನಿಷ್ಠ 60% ಅಂಕಗಳನ್ನು ಹೊಂದಿರಬೇಕು. ಅಥವಾBCA, B.Sc, MCA, M.Sc, BE/B.Tech, M.Tech ಅನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ತಪ್ಪದೇ ಸಂಪೂರ್ಣ ಅಧಿಸೂಚನೆಯನ್ನು ಓದಲು ತಿಳಿಸಲಾಗಿದೆ.
ವಯೋಮಿತಿ:
(02 ಜನವರಿ 2001 ರಿಂದ 01 ಜುಲೈ 2006 ರವರೆಗೆ) ಈ ಎರಡೂ ದಿನಾಂಕಗಳು ಸೇರಿದಂತೆ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ:
ಮೆರಿಟ್ ಪಟ್ಟಿ
ಎಸ್.ಎಸ್.ಬಿ ಸಂದರ್ಶನ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ಪ್ರಾರಂಭದಲ್ಲಿ ಪ್ರತಿ ತಿಂಗಳು 56100/- ರೂ. ಜೊತೆಗೆ ಇತರೆ ಭತ್ಯೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
How to Apply for Indian Navy SSC Executive IT Notification 2025
ಅರ್ಜಿ ಸಲ್ಲಿಸುವ ವಿಧಾನ;
ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ https://www.joinindiannavy.gov.in/en/account/account/state#ಗೆ ಭೇಟಿ ನೀಡಿ.
ರಾಜ್ಯವನ್ನು ಆಯ್ಕೆ ಮಾಡಿ ನಂತರ ಇ-ಮೇಲ್ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಕಾರ್ಯನಿರ್ವಾಹಕ (ಮಾಹಿತಿ ತಂತ್ರಜ್ಞಾನ) ಕಿರು ಸೇವಾ ಆಯೋಗದ ಕೋರ್ಸ್* ಅರ್ಜಿ ನಮೂನೆ ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
“As a BCA graduate with a strong foundation in discipline, leadership, and teamwork, I am eager to serve in the Indian Navy with full commitment.”
Army lover