ನೌಕಾ ಹಡಗು ದುರಸ್ತಿ ಯಾರ್ಡ್​ನಲ್ಲಿ ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆ ಏನು?, ಪ್ರಮುಖ ದಿನಾಂಕಗಳೇನು? ಇತರೆ ಸಂಪೂರ್ಣ ಮಾಹಿತಿ ಇಲ್ಲಿದೆ

Published on:

Updated On:

ಪ್ರಸಕ್ತ ಸಾಲಿಗೆ 50 ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ನೌಕಾಪಡೆಯು ಅಧಿಸೂಚನೆಯನ್ನು ಹೊರಡಿಸಿದೆ.

ರಕ್ಷಣಾ ಸಚಿವಾಲಯದ ನೌಕಾ ಹಡಗು ದುರಸ್ತಿ ಯಾರ್ಡ್ (ಶ್ರೀ ವಿಜಯ ಪುರಂ) 2025-26ನೇ ತರಬೇತಿ ಬ್ಯಾಚ್‌ಗಾಗಿ ಒಂದು ವರ್ಷದ ತಂತ್ರಜ್ಞ (ವೃತ್ತಿಪರ) ಅಪ್ರೆಂಟಿಸ್ ತರಬೇತಿ (IT-02 ಬ್ಯಾಚ್)ಗಾಗಿ ಅಭ್ಯರ್ಥಿಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ apprenticeship.recttindia.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 26, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಆಗಸ್ಟ್​ 15, 2025

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ(SSLC) ಪೂರ್ಣಗೊಳಿಸಿರಬೇಕು ಜೊತೆಗೆ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ(ITI) ಉತ್ತೀರ್ಣರಾಗಿರಬೇಕು.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು.

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ವಿಧಾನ:

  • ಅರ್ಹ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
  • ಸಂದರ್ಶನ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ, ದೈಹಿಕ ಸಾಮರ್ಥ್ಯದ ಪರೀಕ್ಷೆ
  • ಅಂತಿಮ ಮೆರಿಟ್ ಪಟ್ಟಿ

ಅರ್ಜಿ ಶುಲ್ಕ:

ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

How to Apply for Indian Navy Technician Apprentice Recruitment 2025

ಅರ್ಜಿ‌ ಸಲ್ಲಿಸುವ ವಿಧಾನ;

  • ಅಧಿಕೃತ ವೆಬ್ಸೈಟ್ https://www.apprenticeshipindia.gov.in/ ಅಥವಾ https://apprenticeship.recttindia.in/ಗೆ ಭೇಟಿ ನೀಡಿ.
  • ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
  • ಅಪ್ರೆಂಟಿಸ್‌ಶಿಪ್ ತರಬೇತಿಗೆ ದಾಖಲಾತಿ (ಐಟಿ-02 ಬ್ಯಾಚ್) 2025-26 ಅರ್ಜಿ ನಮೂನೆ ಆಯ್ಕೆ ಮಾಡಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.joinindiannavy.gov.in
More UpdatesKarntakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

3 thoughts on “ನೌಕಾ ಹಡಗು ದುರಸ್ತಿ ಯಾರ್ಡ್​ನಲ್ಲಿ ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ”

Leave a Comment