ನಾಗರಿಕ ಸಿಬ್ಬಂದಿ ನೇಮಕಾತಿಯ ಅಡಿಯಲ್ಲಿ ನುರಿತ ಟ್ರೇಡ್ಸ್ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ನೌಕಾಪಡೆ (Indian Navy)ಯು ಅಧಿಸೂಚನೆಯನ್ನು ಹೊರಡಿಸಿದೆ.
ಅರ್ಹ ಮಾಜಿ ನೌಕಾಪಡೆಯ ಅಪ್ರೆಂಟಿಸ್ಗಳಿಂದ ಸಾಮಾನ್ಯ ಕೇಂದ್ರ ಸೇವೆ ನೇಮಕಾತಿ 2025ರ ಅಡಿಯಲ್ಲಿ ಗ್ರೂಪ್-ಸಿ ಹಾಗೂ ನಾನ್ ಗೆಜೆಟೆಡ್ ಒಟ್ಟು 1266 + 49 ನುರಿತ ಟ್ರೇಡ್ಸ್ಮ್ಯಾನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಮಾಜಿ ನೌಕಾಪಡೆಯ ಆಸಕ್ತ ಮತ್ತು ಅರ್ಹ ಅಪ್ರೆಂಟಿಸ್ ಅಭ್ಯರ್ಥಿಗಳು ನೌಕಾ ಡಾಕ್ಯಾರ್ಡ್ ಅಧಿಕೃತ ವೆಬ್ಸೈಟ್ https://onlineregistrationportal.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 02, 2025
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿ, ಐಟಿಐ ಉತ್ತೀರ್ಣ, ಸಂಬಂಧಿತ ಟ್ರೇಡ್ನಲ್ಲಿ ಅಪ್ರೆಂಟಿಸ್ಶಿಪ್ ತರಬೇತಿ ಅಥವಾ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೂಕ್ತ ತಾಂತ್ರಿಕ ಶಾಖೆಯಲ್ಲಿ 2 ವರ್ಷಗಳ ಸೇವೆಯ ಅನುಭವ ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900-63,200ರೂ. ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for Indian Navy Tradesman Skilled Recruitment 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
• ನೌಕಾ ಡಾಕ್ಯಾರ್ಡ್ ಅಧಿಕೃತ ವೆಬ್ಸೈಟ್ https://onlineregistrationportal.in/ಗೆ ಭೇಟಿ ನೀಡಿ.
• ಭಾರತೀಯ ನೌಕಾಪಡೆಯಲ್ಲಿ ನುರಿತ ಟ್ರೇಡ್ಸ್ಮನ್ ಹುದ್ದೆಗೆ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಪೋರ್ಟಲ್ ಆಗಸ್ಟ್ 13 ರಂದು ಸಕ್ರಿಯವಾಗುತ್ತದೆ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.