ನೌಕಾಪಡೆಯಲ್ಲಿ ಟ್ರೇಡ್ಸ್​ಮ್ಯಾನ್ ಸ್ಕಿಲ್ಡ್​ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

Published on:

ನಾಗರಿಕ ಸಿಬ್ಬಂದಿ ನೇಮಕಾತಿಯ ಅಡಿಯಲ್ಲಿ ನುರಿತ ಟ್ರೇಡ್ಸ್​ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ನೌಕಾಪಡೆ (Indian Navy)ಯು ಅಧಿಸೂಚನೆಯನ್ನು ಹೊರಡಿಸಿದೆ.

ಅರ್ಹ ಮಾಜಿ ನೌಕಾಪಡೆಯ ಅಪ್ರೆಂಟಿಸ್‌ಗಳಿಂದ ಸಾಮಾನ್ಯ ಕೇಂದ್ರ ಸೇವೆ ನೇಮಕಾತಿ 2025ರ ಅಡಿಯಲ್ಲಿ ಗ್ರೂಪ್-ಸಿ ಹಾಗೂ ನಾನ್ ಗೆಜೆಟೆಡ್ ಒಟ್ಟು 1266 + 49 ನುರಿತ ಟ್ರೇಡ್ಸ್​ಮ್ಯಾನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಮಾಜಿ ನೌಕಾಪಡೆಯ ಆಸಕ್ತ ಮತ್ತು ಅರ್ಹ ಅಪ್ರೆಂಟಿಸ್‌ ಅಭ್ಯರ್ಥಿಗಳು ನೌಕಾ ಡಾಕ್‌ಯಾರ್ಡ್ ಅಧಿಕೃತ ವೆಬ್ಸೈಟ್ https://onlineregistrationportal.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 13, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಸೆಪ್ಟೆಂಬರ್ 02, 2025

ಶೈಕ್ಷಣಿಕ ಅರ್ಹತೆ:

ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿ, ಐಟಿಐ ಉತ್ತೀರ್ಣ, ಸಂಬಂಧಿತ ಟ್ರೇಡ್​ನಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿ ಅಥವಾ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೂಕ್ತ ತಾಂತ್ರಿಕ ಶಾಖೆಯಲ್ಲಿ 2 ವರ್ಷಗಳ ಸೇವೆಯ ಅನುಭವ ಹೊಂದಿರಬೇಕು.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900-63,200ರೂ. ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಲ್ಲಾ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

How to Apply for Indian Navy Tradesman Skilled Recruitment 2025

ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ;

• ನೌಕಾ ಡಾಕ್‌ಯಾರ್ಡ್ ಅಧಿಕೃತ ವೆಬ್ಸೈಟ್ https://onlineregistrationportal.in/ಗೆ ಭೇಟಿ ನೀಡಿ.

• ಭಾರತೀಯ ನೌಕಾಪಡೆಯಲ್ಲಿ ನುರಿತ ಟ್ರೇಡ್ಸ್‌ಮನ್ ಹುದ್ದೆಗೆ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪೋರ್ಟಲ್ ಆಗಸ್ಟ್ 13 ರಂದು ಸಕ್ರಿಯವಾಗುತ್ತದೆ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.joinindiannavy.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

5 thoughts on “ನೌಕಾಪಡೆಯಲ್ಲಿ ಟ್ರೇಡ್ಸ್​ಮ್ಯಾನ್ ಸ್ಕಿಲ್ಡ್​ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ”

Leave a Comment