Indian Overseas Bank (IOB) Apprentice Notification 2025
2025-26ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಆ.8ರಂದು ಅಧಿಸೂಚನೆಯನ್ನು ಹೊರಡಿಸಿದೆ.
ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಒಟ್ಟು 750 ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಅಧಿಕೃತ ವೆಬ್ಸೈಟ್ https://www.iob.in/Careersಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಆಗಸ್ಟ್ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 20, 2025
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ(Any Degree) ಪೂರ್ಣಗೊಳಿಸಿರಬೇಕು.
ವಯೋಮಿತಿ:
01-08-2025 ರಂತೆ;
ಕನಿಷ್ಠ ಮಿತಿ – 20 ವರ್ಷಗಳು
ಗರಿಷ್ಠ ಮಿತಿ – 28 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
→ ಲಿಖಿತ ಪರೀಕ್ಷೆ → ಸ್ಥಳೀಯ ಭಾಷಾ ಪರೀಕ್ಷೆ → ವೈಯಕ್ತಿಕ ಸಂದರ್ಶನ → ವೈದ್ಯಕೀಯ ಪರೀಕ್ಷೆ
ವೇತನ:
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಸಿಕ 10000-15000ರೂ. ವರೆಗೆ ಸ್ಟೈಫಂಡ್ ನೀಡಲಾಗುತ್ತದೆ.