ಪ್ರಸಕ್ತ ಸಾಲಿನ ಯುಜಿ-ಸಿಇಟಿ ಮತ್ತು ಯುಜಿ-ನೀಟ್ 2025ರ ಮೊದಲನೇ ಸುತ್ತಿನ ನೈಜ ಸೀಟು ಹಂಚಿಕೆಯ ಅಂತಿಮ ಫಲಿತಾಂಶದ ಬಳಿಕ ಸೀಟು ಹಂಚಿಕೆಯಾಗದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಲವು ಸೂಚನೆಗಳನ್ನು ಪ್ರಕಟಿಸಿದೆ.
ಯುಜಿನೀಟ್- ವೈದ್ಯಕೀಯ, ದಂತ ವೈದ್ಯಕೀಯ, ಹೋಮಿಯೋಪತಿ ಹಾಗೂ ಯುಜಿಸಿಇಟಿ – ಇಂಜಿನಿಯರಿಂಗ್, ಆರ್ಕಿಟೆಕ್ಟರ್, ಫಾರ್ಮ ಸೈನ್ಸ್, ವೆಟರಿನರಿ, ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್, ನ್ಯಾಚರೋಪತಿ ಮತ್ತು ಯೋಗ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್) ಮುಂತಾದ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಆಗಸ್ಟ್ 2 ರಂದು ಬಿಡುಗಡೆ ಮಾಡಲಾಗಿತ್ತು.
ಸದರಿ ಪ್ರವೇಶಾತಿಗೆ ಮೊದಲನೇ ಸುತ್ತಿನಲ್ಲಿ ಯಾವುದೇ ಸೀಟು ಹಂಚಿಕೆಯಾಗದಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಕೆಲವು ಸೂಚನೆಗಳನ್ನು KEA ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ನಲ್ಲಿ ಬಿಡುಗಡೆ ಮಾಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳಿಗೆ ಸೂಚನೆ:
• ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಸೀಟು ಹಂಚಿಕೆಯಾಗದಿದ್ದಲ್ಲಿ ಅಭ್ಯರ್ಥಿಗಳು ಮುಂದೆ ಏನು ಮಾಡಬೇಕು ಎಂದು ಯೋಚಿಸುವ ಅಗತ್ಯವಿರುವುದಿಲ್ಲ, ಈಗಾಗಲೇ OPTIONS ಗಳನ್ನು ನಮೂದಿಸಿ ಆದರೆ ಯಾವುದೇ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳು CHOICE ಗಳನ್ನು ನೀಡುವ ಅವಶ್ಯಕತೆ ಇರುವುದಿಲ್ಲ.
• ಅಭ್ಯರ್ಥಿಗಳು ಮುಂದಿನ ಸುತ್ತಿನ (ಎರಡನೇ ಸುತ್ತಿನ ಸೀಟು ಹಂಚಿಕೆಯ) ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅರ್ಹತೆಯನ್ನು ಹೊಂದಿರುತ್ತಾರೆ ಹಾಗೂ ಭಾಗವಹಿಸಬಹುದು.
• ಆದರೆ ಎರಡನೇ ಸುತ್ತಿನಲ್ಲಿ ಇಚ್ಛೆ/ ಆಯ್ಕೆಗಳನ್ನು ದಾಖಲಿಸುವ ಪ್ರಕ್ರಿಯೆ ಪ್ರಾರಂಭಿಸಿದ ನಂತರ option entry portal ನಲ್ಲಿ ಕಡ್ಡಾಯವಾಗಿ ಲಾಗಿನ್ ಮಾಡಿ ಒಪ್ಪಿಗೆ ನೀಡಿದ ನಂತರ ಮೊದಲನೇ ಸುತ್ತಿನಲ್ಲಿ ಅಭ್ಯರ್ಥಿಗಳು ದಾಖಲಿಸಿದ ಎಲ್ಲಾ options ಗಳನ್ನು ತೋರಿಸಲಾಗುತ್ತದೆ.
ವೈದ್ಯಕೀಯ ವಿದ್ಯಾರ್ಥಿಗಳು:
ಒಂದು ವೇಳೆ ಅಭ್ಯರ್ಥಿಯು ವೈದ್ಯಕೀಯ ಕೋರ್ಸಿಗೆ ಈಗಾಗಲೇ ದಾಖಲಿಸಿರುವ options ಗಳೊಂದಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ CAUTION DEPOSIT ಅನ್ನು ಪಾವತಿಸಬೇಕು. (CAUTION DEPOSIT ಅನ್ನು ಪಾವತಿಸಲು ವೇಳಾಪಟ್ಟಿಯನ್ನು ನೀಡಲಾಗುವುದು)
ದಂತವೈದ್ಯಕೀಯ ಮತ್ತು ಹೋಮಿಯೋಪತಿ ವಿದ್ಯಾರ್ಥಿಗಳು
ದಂತವೈದ್ಯಕೀಯ ಮತ್ತು ಹೋಮಿಯೋಪತಿ ಸೀಟುಗಳಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸುವುದಕ್ಕೆ ವಿದ್ಯಾರ್ಥಿಗಳು (CAUTION DEPOSIT) ಅನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ.
UGCET/UGNEET – 2025 who have NOT been allotted seat candidates Instructions PDF