ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(IOCL) ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ತಮಿಳುನಾಡು ಕರ್ನಾಟಕ ಕೇರಳ ಆಂಧ್ರ ಪ್ರದೇಶ ಮತ್ತು ತೆಲಂಗಾಣದ ವಿವಿಧ ಘಟಕಗಳಲ್ಲಿ ಟ್ರೇಡ್, ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಸಿವಿಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 400 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು IOCL ನ ಅಧಿಕೃತ ವೆಬ್ ಸೈಟ್ https://iocl.com/ ಭೇಟಿ ನೀಡಿ ಆಗಸ್ಟ್ 19 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಗಳು ಮತ್ತು ಆನ್ ಲೈನ್ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಲೇಖನದಲ್ಲಿ IOCL Apprentice Recruitment 2024 ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of IOCL Apprentice Notification 2024
Organization Name – Indian Oil Corporation Limited (IOCL) Post Name – Trade/Technician/Graduate Apprentice Total Vacancy – 400 Application Process: Online Job Location – All Over India (Karnataka)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 2, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 19, 2024
ವಿದ್ಯಾರ್ಹತೆ:
ಟ್ರೇಡ್ ಅಪ್ರೆಂಟಿಸ್: ಐಟಿಐ ಪಾಸ್.
ಟೆಕ್ನೀಷಿಯನ್ ಅಪ್ರೆಂಟಿಸ್: ಡಿಪ್ಲೊಮ ಪಾಸ್.
ಗ್ರಾಜುಯೇಟ್ ಅಪ್ರೆಂಟಿಸ್: ಬಿಇ, ಬಿ.ಟೆಕ್ ಸೇರಿದಂತೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ರಿಂದ 24 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಲಿಕ್ಕೆ;
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 3 ವರ್ಷಗಳು SC/ST ಅಭ್ಯರ್ಥಿಗಳಿಗೆ – 5 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆಯನ್ನು ನಡೆಸಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.