ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 1770 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಬೃಹತ್ ನೇಮಕಾತಿ 2025 – ಪೈಪ್ ಲೈನ್ಸ್ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1770 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IOCL ಅಧಿಕೃತ ವೆಬ್ಸೈಟ್ iocl.comಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Indian Oil Corporation Limited Post Name – Apprentice Total Vacancy – 1770 Application Process – Online Job Location – All Over India
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ- 03-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 02-06-2025
ದಾಖಲೆ ಪರಿಶೀಲನೆಗೆ ಕರೆಯಲಾದ ಅಭ್ಯರ್ಥಿಗಳ ಪಟ್ಟಿಯ ಪ್ರಕಟಣೆಯ ತಾತ್ಕಾಲಿಕ ದಿನಾಂಕ- 09-06-2025
ದಾಖಲೆ ಪರಿಶೀಲನೆಯ ತಾತ್ಕಾಲಿಕ ದಿನಾಂಕ 16-06-2025 ರಿಂದ 24-06-2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಐಟಿಐ/ ಡಿಪ್ಲೊಮಾ/ ಪದವಿ ಪಡೆದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿ.
ವಯೋಮಿತಿ:
ದಿನಾಂಕ 31-05-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು.
ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು.
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಆಯ್ಕೆ ವಿಧಾನ:
ಅಭ್ಯರ್ಥಿಗಳ ಕಿರುಪಟ್ಟಿ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಉಲ್ಲೇಖಿಸಲಾಗಿಲ್ಲ.
How to Apply for IOCL Apprentice (Refineries Division) Recruitment 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಧಿಕೃತ ವೆಬ್ಸೈಟ್ https://iocl.com/ ಗೆ ಭೇಟಿ ನೀಡಿ.
Home-> IndianOil For You-> IndianOil for Careers -> Apprenticeships ಗೆ ಭೇಟಿ ನೀಡಿ.
ಮುಂದೆ ಅಲ್ಲಿ “Engagement of Apprentices under Refineries Division – 2025” ನ ಅಡಿಯಲ್ಲಿ ನೀಡಿರುವ “Click here to Apply Online” ಲಿಂಕ್ ಮೇಲೆ ಕ್ಲಿಕ್ ಮಾಡಿ
ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.