ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನ ವಿವಿಧ ಸಂಸ್ಕರಣಾಗಾರ ಘಟಕಗಳಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ 2785 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಟ್ರೇಡ್ ಅಪ್ರೆಂಟಿಸ್, ತಂತ್ರಜ್ಞ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಲೆಕ್ಕಪರಿಶೋಧಕ ಹಾಗೂ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಟ್ರೇಡ್/ವಿಭಾಗಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನ.28 ರಿಂದ ಡಿ.18ರೊಳಗೆ IOCL ಅಧಿಕೃತ ಜಾಲತಾಣ https://www.iocrefrecruit.in/iocrefrecruit/indexಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ನವೆಂಬರ್ 28, 2025
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 18, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಸ್ಸೆಸ್ಸೆಲ್ಸಿ ಜೊತೆಗೆ ಐಟಿಐ, ದ್ವಿತೀಯ ಪಿಯುಸಿ ಉತ್ತೀರ್ಣ, ಬಿ.ಎ./ಬಿ.ಎಸ್ಸಿ/ಬಿ.ಕಾಂ/ ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
30-11-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಪ್ರಕಾರ ನಿಗದಿತ ದರದಲ್ಲಿ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಕೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
✓ ಹಂತ I:
• ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.apprenticeshipindia.gov.in/ ಗೆ ಭೇಟಿ ನೀಡಿ ನೋಂದಾಯಿಸಿ.
• ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://nats.education.gov.in/student_register.php ಗೆ ಭೇಟಿ ನೀಡಿ ನೋಂದಾಯಿಸಿ.
• ಬಳಿಕ ಸರ್ಚ್ ಬಾರ್ ನಲ್ಲಿ “ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 1961ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ಗಳ ನೇಮಕಾತಿ” ಹುಡುಕಿ ನಂತರ ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಅಭ್ಯರ್ಥಿಗಳು ಸಂಬಂಧಿತ ಅವಕಾಶಕ್ಕಾಗಿ ಆಯಾ ಪೋರ್ಟಲ್ ಮೂಲಕ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಬಳಿಕ.
✓ ಹಂತ II
• ಅಪ್ರೆಂಟಿಸ್ ಹುದ್ದೆಗಳಿಗೆ ತಮ್ಮ ನೋಂದಣಿ/ಅರ್ಜಿಯನ್ನು ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಐ.ಓ.ಸಿ.ಎಲ್ ಅಧಿಕೃತ ಜಾಲತಾಣ https://www.iocrefrecruit.in/iocrefrecruit/index ಕ್ಕೆ ಭೇಟಿ ನೀಡಿ.
• ನಂತರ ಅರ್ಜಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರಗಳು, ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿ ಪ್ರತಿ ಮುದ್ರಿಸಿ ಹಾಗೂ ನೋಂದಣಿ ಐಡಿಯನ್ನು ಬರೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಂತ I ಮತ್ತು ಹಂತ II ಎರಡನ್ನೂ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.
Verygood information
Good job