ದೇಶದ ಪ್ರಮುಖ ವೈವಿಧ್ಯಮಯ ಮತ್ತು ಸಂಯೋಜಿತ ಇಂಧನ ಕಂಪನಿಯಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪದವೀಧರ ಎಂಜಿನಿಯರ್/ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಈ ಬಾರಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೂಲಕ ಕೆಮಿಕಲ್, ಎಲೆಕ್ಟ್ರಿಕಲ್ ಹಾಗೂ ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಎಂಜಿನಿಯರ್‌ಗಳು/ಅಧಿಕಾರಿ(ಗ್ರೇಡ್-ಎ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪದವೀಧರ ಎಂಜಿನಿಯರ್ ಅಭ್ಯರ್ಥಿಗಳು ಐಬಿಪಿಎಸ್ ಅಧಿಕೃತ ಜಾಲತಾಣ https://ibpsonline.ibps.in/iocljun25/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 05, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 21, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% (ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 55%) ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಬಿ.ಟೆಕ್./ಬಿಇ ಪದವಿ ಅಥವಾ ತತ್ಸಮಾನ ಪದವಿ ಹೊಂದಿರಬೇಕು.
ವಯೋಮಿತಿ:
01-07-2025 ರಂತೆ;
• ಕನಿಷ್ಠ ವಯಸ್ಸಿನ ಮಿತಿ – 26 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ವರ್ಗವಾರು ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
ಗುಂಪು ಚರ್ಚೆ (GD) ಮತ್ತು ಗುಂಪು ಕಾರ್ಯ (GT)
ವೈಯಕ್ತಿಕ ಸಂದರ್ಶನ (PI)
ವೇತನ:
• ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000 – 1,60,000ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ.
• ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for IOCL Engineers/Officers Recruitment 2025