ಇಂಡಿಯನ್ ಆಯಿಲ್‌ನಲ್ಲಿ ಎಂಜಿನಿಯರ್‌ ಹುದ್ದೆಗಳ ಭರ್ತಿ; ಸೆ.21 ರೊಳಗೆ ಅರ್ಜಿ ಸಲ್ಲಿಸಿ

IOCL Engineers/Officers Recruitment 2025: ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ಮುಖ್ಯ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Published on:

ದೇಶದ ಪ್ರಮುಖ ವೈವಿಧ್ಯಮಯ ಮತ್ತು ಸಂಯೋಜಿತ ಇಂಧನ ಕಂಪನಿಯಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪದವೀಧರ ಎಂಜಿನಿಯರ್‌/ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ಈ ಬಾರಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೂಲಕ ಕೆಮಿಕಲ್, ಎಲೆಕ್ಟ್ರಿಕಲ್ ಹಾಗೂ ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಎಂಜಿನಿಯರ್‌ಗಳು/ಅಧಿಕಾರಿ(ಗ್ರೇಡ್-ಎ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪದವೀಧರ ಎಂಜಿನಿಯರ್‌ ಅಭ್ಯರ್ಥಿಗಳು ಐಬಿಪಿಎಸ್ ಅಧಿಕೃತ ಜಾಲತಾಣ https://ibpsonline.ibps.in/iocljun25/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು‌ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 05, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಸೆಪ್ಟೆಂಬರ್ 21, 2025

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% (ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 55%) ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಬಿ.ಟೆಕ್./ಬಿಇ ಪದವಿ ಅಥವಾ ತತ್ಸಮಾನ ಪದವಿ ಹೊಂದಿರಬೇಕು.

ವಯೋಮಿತಿ:

01-07-2025 ರಂತೆ;

• ಕನಿಷ್ಠ ವಯಸ್ಸಿನ ಮಿತಿ – 26 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ವರ್ಗವಾರು ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
  • ಗುಂಪು ಚರ್ಚೆ (GD) ಮತ್ತು ಗುಂಪು ಕಾರ್ಯ (GT)
  • ವೈಯಕ್ತಿಕ ಸಂದರ್ಶನ (PI)

ವೇತನ:

• ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000 – 1,60,000ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

• ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ.

• ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

How to Apply for IOCL Engineers/Officers Recruitment 2025

ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ;

  • ಐಬಿಪಿಎಸ್ ಅಧಿಕೃತ ಜಾಲತಾಣ https://ibpsonline.ibps.in/iocljun25/ ಕ್ಕೆ ಭೇಟಿ ನೀಡಿ.
  • ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
  • ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
  • ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಬಳಿಕ ಸಲ್ಲಿಸಿದ ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websiteiocl.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment