ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನಲ್ಲಿ ನಾನ್ ಎಕ್ಸಿಕ್ಯೂಟಿವ್ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ ಅರ್ಹ ಯುವ ಮತ್ತು ಶಕ್ತಿಯುತ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ.
ವಿವಿಧ ಸಂಸ್ಕರಣಾಗಾರ/ಪೆಟ್ರೋಕೆಮಿಕಲ್ ಘಟಕಗಳಲ್ಲಿ ವಿವಿಧ ವಿಭಾಗಗಳಿಗೆ 394 ಜೂನಿಯರ್ ಎಂಜಿನಿಯರ್ ಸಹಾಯಕ ಹುದ್ದೆಗಳಿಗ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು 2026ರ ಜನವರಿ 09 ರೊಳಗೆ IBPSನ ಅಧಿಕೃತ ಜಾಲತಾಣದ ಲಿಂಕ್ https://ibpsreg.ibps.in/ioclnov25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಕಂಪ್ಯೂಟರ್ ಆಧಾರಿತ ಪರೀಕ್ಷೆ ಕೌಶಲ್ಯ/ಪ್ರಾವೀಣ್ಯತೆ/ದೈಹಿಕ ಪರೀಕ್ಷೆ (SPPT) ದಾಖಲೆ ಪರಿಶೀಲನೆ
ವೇತನ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 25,000ರೂ. ಗಳಿಂದ – 1,05,000ರೂ. ವರೆಗೆ ಪ್ರತಿ ತಿಂಗಳು ವೇತನ ಹಾಗೂ ಇತರ ಸೌಲಭ್ಯಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 300ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• IBPS ಅಧಿಕೃತ ಜಾಲತಾಣ https://ibpsreg.ibps.in/ioclnov25/ ಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಮೂಲ ಮಾಹಿತಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಅಂತಿಮವಾಗಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಮುದ್ರಿಸಿ.
Deepak bhaskar naik
T = sagara
D= shivamogga
Post = talavata