ಭಾರತದ ಅತಿದೊಡ್ಡ ವಾಣಿಜ್ಯ ಉದ್ಯಮ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನಲ್ಲಿ 1961ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಪೈಪ್ ಲೈನ್ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 537 ತಾಂತ್ರಿಕ ಅಪ್ರೆಂಟಿಸ್, ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆ.18ರೊಳಗೆ https://www.apprenticeshipindia.gov.in ಅಥವಾ https://nats.education.gov.in/ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 18, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ, ಡಿಪ್ಲೊಮಾ, ಐಟಿಐ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ಟೆಕ್ನಿಷಿಯನ್ ಅಪ್ರೆಂಟಿಸ್ – ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ
ಟ್ರೇಡ್ ಅಪ್ರೆಂಟಿಸ್ – ಪದವಿ
ಡೇಟಾ ಎಂಟ್ರಿ ಆಪರೇಟರ್ – 12ನೇ ತರಗತಿ
ವಯೋಮಿತಿ:
31.08.2025ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು
ಸರ್ಕಾರದ ನಿಯಮಾನುಸಾರ ವರ್ಗವಾರು ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಶಾರ್ಟ್ ಲಿಸ್ಟಿಂಗ್
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಶಿಷ್ಯವೇತನ/ತರಬೇತಿ ಭತ್ಯೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಪ್ರಕಾರ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
How to Apply for IOCL Pipelines Division Apprentice Recruitment 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
1. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.apprenticeshipindia.gov.in/ ಗೆ ಭೇಟಿ ನೀಡಿ ನೋಂದಾಯಿಸಿ.
2. ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ (https://nats.education.gov.in/student_register.php ಗೆ ಭೇಟಿ ನೀಡಿ ನೋಂದಾಯಿಸಿ.
• ಬಳಿಕ ಸರ್ಚ್ ಬಾರ್ ನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ ಪೈಪ್ಲೈನ್ಸ್ ವಿಭಾಗದಲ್ಲಿ 1961ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ಗಳ ನೇಮಕಾತಿ ಹುಡುಕಿ ನಂತರ ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಈಗ ನೀವು ಯಶಸ್ವಿಯಾಗಿ ಅಪರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುತ್ತೀರಿ.
Ms, kollesha,S,S,L,C, II puc Completing ms kollesha
I’m interested job
Jjj