IPPB Assistant Manager and Junior Associate Recruitment 2025
ಅಂಚೆ ಇಲಾಖೆ ಅಡಿಯಲ್ಲಿ ಸ್ಥಾಪಿಸಲಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB)ನಲ್ಲಿ ಜೂನಿಯರ್ ಅಸೋಸಿಯೇಟ್ ಹಾಗೂ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಬ್ಯಾಂಕಿನ ವಿವಿಧ ಕಚೇರಿಗಳಲ್ಲಿ 199 ಜೂನಿಯರ್ ಅಸೋಸಿಯೇಟ್ ಮತ್ತು 110 ಸಹಾಯಕ ವ್ಯವಸ್ಥಾಪಕರು (ಸ್ಕೇಲ್-1) ಸೇರಿದಂತೆ ಒಟ್ಟು 309 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಡಿ.01 ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು, ಸದರಿ ಅವಧಿಯನ್ನು ಡಿ.08ರವರೆಗೆ ವಿಸ್ತರಿಸಲಾಗಿದೆ. ಈ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಪದವೀಧರ ಉದ್ಯೋಗಾಕಾಂಕ್ಷಿಗಳು IBPS ಅಧಿಕೃತ ಜಾಲತಾಣ https://ibpsreg.ibps.in/ippbloct25/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ಡಿಸೆಂಬರ್ 08, 2025
ಶೈಕ್ಷಣಿಕ ಅರ್ಹತೆ:
IPPB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಸರ್ಕಾರಿ ನಿಯಂತ್ರಕ ಸಂಸ್ಥೆಯಿಂದ ಅನುಮೋದಿಸಲ್ಪಟ್ಟ ವಿಶ್ವವಿದ್ಯಾಲಯ/ಸಂಸ್ಥೆ/ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
01-11-2025 ರಂತೆ;
✓ ಜೂನಿಯರ್ ಅಸೋಸಿಯೇಟ್ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 32 ವರ್ಷಗಳು
✓ ಸಹಾಯಕ ವ್ಯವಸ್ಥಾಪಕ (ಸ್ಕೇಲ್-1) ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಆಯ್ಕೆ ವಿಧಾನ:
ಮೆರಿಟ್ ಆಧಾರಿತ ಮೌಲ್ಯಮಾಪನ
ಆನ್ಲೈನ್ ಪರೀಕ್ಷೆ
ಗುಂಪು ಚರ್ಚೆ
ಸಂದರ್ಶನ
ಸಂಬಳ:
ನೇಮಕಗೊಂಡ ಅಭ್ಯರ್ಥಿಗಳಿಗೆ (CDA ಹಾಗೂ IDA ವೇತನ ಶ್ರೇಣಿ) ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ – 750ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಮೊದಲಿಗೆ IBPS ಅಧಿಕೃತ ಜಾಲತಾಣ https://ibpsreg.ibps.in/ippbloct25/ಕ್ಕೆ ಭೇಟಿ ನೀಡಿ.
• “ಜೂನಿಯರ್ ಅಸೋಸಿಯೇಟ್ಸ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸ್ಕೆಲ್-1) ಹುದ್ದೆಗಳ ನೇಮಕಾತಿ” – ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ನೋಂದಣಿ ಸಂಖ್ಯೆ, ಭದ್ರತಾ ಕೋಡ್ ಹಾಗೂ ಕ್ಯಾಪ್ಚಾ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
Ippb Junior Associates &Amp; Assistant Manager (Scale-I) Online Form 2025
• ಲಾಗಿನ್ ಆದ ನಂತರ ಅರ್ಜಿಯಲ್ಲಿ ಕೇಳಲಾಗುವ ಮೂಲ ಮಾಹಿತಿಗಳನ್ನು ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
IPPB JA/AM Online Application Form Last Date Extension Notice PDF (Dated on 1/12/2025)
I want the job
Hi
K eradagiri
Hii