ಸಂವಹನ ಸಚಿವಾಲಯದ ಅಂಚೆ ಇಲಾಖೆಯ ಅಡಿಯಲ್ಲಿ ಸ್ಥಾಪಿಸಲಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB) ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಬ್ಯಾಂಕಿನ ವಿವಿಧ ಕಚೇರಿಗಳಲ್ಲಿ ಒಟ್ಟು 348 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://ibpsonline.ibps.in/ippblaug25/ ಲಿಂಕ್ ಮೂಲಕ ಅ.29ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಅಕ್ಟೋಬರ್ 29, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಸರ್ಕಾರಿ ನಿಯಂತ್ರಕ ಸಂಸ್ಥೆಯಿಂದ ಅನುಮೋದಿಸಲ್ಪಟ್ಟ ವಿಶ್ವವಿದ್ಯಾಲಯ/ಸಂಸ್ಥೆ/ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
01-08-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿ
ದಾಖಲೆ ಪರಿಶೀಲನೆ
ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ 30,000ರೂ.ವರೆಗೆ ವೇತನ ನೀಡಲಾಗುತ್ತದೆ ಹಾಗೂ ಇತರೆ ಭತ್ಯೆಗಳನ್ನು ಒದಗಿಸಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 750ರೂ.
How to Apply for IPPB Bank Executive Recruitment 2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
• IBPS ಅಧಿಕೃತ ಜಾಲತಾಣ https://ibpsonline.ibps.in/ippblaug25/ ಕ್ಕೆ ಭೇಟಿ ನೀಡಿ.
• “Engagement of Gramin Dak Sevak from Department of Posts to IPPB as Executive Advt. No.: IPPB/CO/HR/RECT./2025-26/03” – ಹುದ್ದೆಗೆ ಅರ್ಜಿ ಸಲ್ಲಿಸಲು ಬಲ ಭಾಗದಲ್ಲಿ ನೀಡಲಾದ ಲಿಂಕ್ ಬಳಸಿ, ನೋಂದಣಿ ಸಂಖ್ಯೆ, ಭದ್ರತಾ ಕೋಡ್ ಹಾಗೂ ಕ್ಯಾಪ್ಚಾ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
Ippb Bank Executive 2025 Online Application Form
• ಲಾಗಿನ್ ಆದ ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಇಮೇಲ್ ಐಡಿ jobsdop@ippbonline.in ಅನ್ನು ಸಂಪರ್ಕಿಸಿ.