ಇನ್‌ಸ್ಟಿಟ್ಯೂಟ್ ಆಫ್ ಪ್ಲಾಸ್ಮಾ ರಿಸರ್ಚ್ (IPR) ಸಂಸ್ಥೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿ ಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇನ್‌ಸ್ಟಿಟ್ಯೂಟ್ ಆಫ್ ಪ್ಲಾಸ್ಮಾ ರಿಸರ್ಚ್ 2024 ರ ನೇಮಕಾತಿಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 27 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ನಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು IPR ನ ಅಧಿಕೃತ ವೆಬ್‌ಸೈಟ್ ipr.res.in ಗೆ ಭೇಟಿ ನೀಡಿ ಆಗಸ್ಟ್ 27ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ IPR MTS Recruitment 2024 ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Institute Name – The Institute for Plasma Research Post Name – Multi-Tasking Staff (MTS) Total Vacancy – 27 Application Process: Online Place of Employment – All over India
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 29/07/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -27/08/2024
ಖಾಲಿ ಇರುವ ಹುದ್ದೆಗಳ ವಿವರ:
Multi-Tasking Staff (MTS) – 27 ಹುದ್ದೆಗಳು
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
MTS Recruitment 2024 ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವವರ ವಯಸ್ಸು ಕನಿಷ್ಠ 18ರಿಂದ ಗರಿಷ್ಠ 30 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳಿಗೆ – 03 ವರ್ಷಗಳು SC / ST ಅಭ್ಯರ್ಥಿಗಳಿಗೆ – 05 Years ವರ್ಷಗಳು
ವೇತನ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ₹18,000 ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ /OBC/EWS ವರ್ಗದ ಅಭ್ಯರ್ಥಿಗಳಿಗೆ – ₹200/–
SC/ST/Female/PwBD/ EWS/ Ex-Serviceman ವರ್ಗದ ಅಭ್ಯರ್ಥಿಗಳಿಗೆ – ₹0/- (Nil)
ಅರ್ಜಿ ಶುಲ್ಕವನ್ನು SBI ಬ್ಯಾಂಕಿನ ಅಧಿಕೃತ ವೆಬ್ಸೈಟ್ https://www.onlinesbi.sbi/sbicollect/icollecthome.htm ಮೂಲಕ ಆನ್ ಲೈನ್ ನಲ್ಲಿ ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸುವುದು ಹೇಗೆ..? ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು IPRನ ಅಧಿಕೃತ ವೆಬ್ ಸೈಟ್ www.ipr.res.in ಭೇಟಿ ನೀಡಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಅರ್ಜಿ ಸಲ್ಲಿಸಬಹುದು.