ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ (IRDAI) ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ (IRDAI) 2024-25ನೇ ಸಾಲಿನ ಸಹಾಯಕ ವ್ಯವಸ್ಥಾಪಕರ (AM) ಒಟ್ಟು 49 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು 2 ಹಂತದ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ವಿವಿಧ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು IRDAI Assistant Manager Notification 2024 ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ irdai.gov.in ಸೆಪ್ಟೆಂಬರ್ 20 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ IRDAI Assistant Manager Recruitment ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of IRDAI Recruitment 2024
Organization Name – Insurance Regulatory and Development Authority of India (IRDAI) Post Name – Assistant Manager Total Vacancy – 49 Application Process: online Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 21, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 20, 2024
ಶೈಕ್ಷಣಿಕ ಅರ್ಹತೆಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಸಂಬಂಧಿಸಿದ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿರಬೇಕು.
(ಖಾಲಿರುವ ಹುದ್ದೆಗಳ ಅನ್ವಯ ವಿದ್ಯಾರ್ಹತೆಯ ಮಾಹಿತಿಯನ್ನು ವಿವರವಾಗಿ ತಿಳಿಸಲಾಗಿದ್ದು ಅಭ್ಯರ್ಥಿಗಳು ಒಮ್ಮೆ ಚೆಕ್ ಮಾಡಿ)
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ರಿಂದ ಗರಿಷ್ಠ 30 ವರ್ಷದ ಒಳಗಿರಬೇಕು.