IREDAನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಹೀಗೆ ಅಪ್ಲೈ ಮಾಡಿ

ಅರ್ಜಿ ಸಲ್ಲಿಸಲು ಏ.03 ಕೊನೆದಿನ

Published on:

ಭಾರತ ಸರ್ಕಾರದ ಉದ್ಯಮಗಳಲ್ಲಿ ಒಂದಾಗಿರುವ ಇಂಡಿಯನ್ ರಿನ್ಯೂಯಬಲ್ ಎನರ್ಜಿ ಡೆವಲಪ್ಮೆಂಟ್ ಏಜೆನ್ಸಿ ಲಿಮಿಟೆಡ್‌(IREDA) ವಿವಿಧ ಮ್ಯಾನೇಜರ್‌ ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಒಟ್ಟು 32 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಅರ್ಹ ಆಸಕ್ತ ಅಭ್ಯರ್ಥಿಗಳು ಏ.03ರೊಳಗೆ ಐಆರ್‌ಇಡಿಎ ಅಧಿಕೃತ ಜಾಲತಾಣ https://www.ireda.in/careersಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮಾರ್ಚ್ 14, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 03, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 03, 2026

ಖಾಲಿ ಇರುವ ಹುದ್ದೆಗಳ ವಿವರ:

ಜನರಲ್ ಮ್ಯಾನೇಜರ್ – 05 ಹುದ್ದೆಗಳು
ಚೀಫ್ ಮ್ಯಾನೇಜರ್ – 03 ಹುದ್ದೆಗಳು
ಜನರಲ್ ಮ್ಯಾನೇಜರ್ – 05 ಹುದ್ದೆಗಳು
ಅಡಿಷನಲ್ ಜನರಲ್ ಮ್ಯಾನೇಜರ್ – 01 ಹುದ್ದೆ
ಡೆಪ್ಯೂಟಿ ಜನರಲ್ ಮ್ಯಾನೇಜರ್ – 02 ಹುದ್ದೆಗಳು
ಚೀಫ್ ಮ್ಯಾನೇಜರ್ (ಪ್ರಾಜೆಕ್ಟ್) – 02 ಹುದ್ದೆಗಳು
ಎಕ್ಸಿಕ್ಯೂಟಿವ್ ಡೈರೆಕ್ಟರ್ – 01 ಹುದ್ದೆ
ಮ್ಯಾನೇಜರ್ – 03 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ – 02 ಹುದ್ದೆಗಳು
ಆಫೀಸರ್ – 08 ಹುದ್ದೆಗಳು

ಒಟ್ಟು – 32 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

✓ ಮ್ಯಾನೇಜರ್ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿ.ಎ, ಸಿ.ಎಂ.ಎ, ಎಂ.ಬಿ.ಎ, ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಬಿ.ಎಸ್ಸಿ, ಕಾನೂನು ಪದವಿ ಪೂರ್ಣಗೊಳಿಸಿರಬೇಕು.

✓ ಎಕ್ಸಿಕ್ಯೂಟಿವ್ ಡೈರೆಕ್ಟರ್ ಹುದ್ದೆಗೆ; ಭಾರತೀಯ ಕಂಪನಿ ಕಾರ್ಯದರ್ಶಿಗಳ ಸಂಸ್ಥೆಯ ಸಹ ಸದಸ್ಯರು ಅರ್ಜಿ ಸಲ್ಲಿಸಬಹುದು. ಅಪೇಕ್ಷಣೀಯ ಅರ್ಹತೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲ್.ಎಲ್.ಬಿ/ಸಿಎ/ಸಿಎಂಎ/ಎಂಬಿಎ ಪದವಿ ಅಥವಾ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಥವಾ ಫೈನಾನ್ಸ್ ವಿಷಯದಲ್ಲಿ ತತ್ಸಮಾನ ಪದವಿ ಪೂರ್ಣಗೊಳಿಸಿರಬೇಕು.

✓ ಆಫೀಸರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

*ಜೊತೆಗೆ ಹುದ್ದೆಗೆ ನಿಗದಿಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ಮಿತಿ – 52 ವರ್ಷಗಳು
ಚೀಫ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ಮಿತಿ – 42 ವರ್ಷಗಳು
ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ಮಿತಿ – 52 ವರ್ಷಗಳು
ಅಡಿಷನಲ್ ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ಮಿತಿ – 48 ವರ್ಷಗಳು
ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ಮಿತಿ – 45 ವರ್ಷಗಳು
ಚೀಫ್ ಮ್ಯಾನೇಜರ್ (ಪ್ರಾಜೆಕ್ಟ್) ಹುದ್ದೆಗೆ ಗರಿಷ್ಠ ಮಿತಿ – 42 ವರ್ಷಗಳು
ಎಕ್ಸಿಕ್ಯೂಟಿವ್ ಡೈರೆಕ್ಟರ್ ಹುದ್ದೆಗೆ ಗರಿಷ್ಠ ಮಿತಿ – 55 ವರ್ಷಗಳು
ಮ್ಯಾನೇಜರ್ ಹುದ್ದೆಗೆ ಗರಿಷ್ಠ ಮಿತಿ – 35 ವರ್ಷಗಳು
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ಮಿತಿ – 33 ವರ್ಷಗಳು
ಆಫೀಸರ್ ಹುದ್ದೆಗೆ ಗರಿಷ್ಠ ಮಿತಿ – 50 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10-15 ವರ್ಷಗಳು.

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 30,000ರೂ. 3,00,000ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

  • ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ಅರ್ಹತಾ ಪರೀಕ್ಷೆ/ಸ್ಕ್ರೀನಿಂಗ್ ಪರೀಕ್ಷೆ
  • ದಾಖಲೆಗಳ ಪರಿಶೀಲನೆ
  • ಸಂದರ್ಶನ

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹1000
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

• ಅಭ್ಯರ್ಥಿಗಳು IREDA ಅಧಿಕೃತ ಜಾಲತಾಣ https://www.ireda.in/careersಕ್ಕೆ ಭೇಟಿ ನೀಡಿ.

• “ಪ್ರಸ್ತುತ ಅಧಿಸೂಚನೆಗಳು” ವಿಭಾಗದ ಕೆಳಗೆ ನೀಡಲಾಗಿರುವ *ಕಾರ್ಯನಿರ್ವಾಹಕರ ನೇಮಕಾತಿ – ನೇಮಕಾತಿ – ಸಂಖ್ಯೆ. IREDA/ನೇಮಕಾತಿ/ HR/01/2026 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ* ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websitewww.ireda.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “IREDAನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಹೀಗೆ ಅಪ್ಲೈ ಮಾಡಿ”

Leave a Comment