ರೈಲ್ವೆ ಸಚಿವಾಲಯದಡಿ ಬರುವ ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್(IRFC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.
ಸಹಾಯಕ(ಎನ್ಇ5 ಲೆವೆಲ್) 16 ಸ್ಥಾನಗಳು, ಸಹಾಯಕ ವ್ಯವಸ್ಥಾಪಕ/ಫೈನಾನ್ಸ್(ಇ1 ಲೆವೆಲ್) 07 ಸ್ಥಾನಗಳು ಸೇರಿದಂತೆ ಒಟ್ಟು 23 ಅಭ್ಯರ್ಥಿಗಳನ್ನು ನೇಮಕ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 01ರವರೆಗೆ ಅವಕಾಶವಿದೆ. ಬಿ.ಕಾಂ ಜೊತೆಗೆ ಸಿಎ/ಸಿಎಂಎ, ಎಂಬಿಎ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗಾಗಿ ಐಆರ್ಎಫ್ಸಿ ಅಧಿಕೃತ ಜಾಲತಾಣ https://irfc.co.in/active-jobsಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 01, 2026
ಶೈಕ್ಷಣಿಕ ಅರ್ಹತೆ:
✓ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಪದವಿ(ಬಿ.ಕಾಂ) ಪೂರ್ಣಗೊಳಿಸಿರಬೇಕು ಹಾಗೂ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ/ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
✓ ಸಹಾಯಕ ವ್ಯವಸ್ಥಾಪಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಪದವಿ(ಬಿ.ಕಾಂ) ಪೂರ್ಣಗೊಳಿಸಿರಬೇಕು ಹಾಗೂ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ/ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ಸಿ.ಎ/ಸಿ.ಎಮ್.ಎ ಅರ್ಹತೆಯನ್ನು ಪಡೆದಿರಬೇಕು. ಅಥವಾ
ಫೈನಾನ್ಸ್ ನಲ್ಲಿ ಎಂಬಿಎ/(ಫೈನಾನ್ಸ್) ಮ್ಯಾನೇಜ್ಮೆಂಟ್ ನಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕನಿಷ್ಠ ಮಿತಿ 18 ವರ್ಷಗಳು ಗರಿಷ್ಠ ಮಿತಿ 30 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10-15 ವರ್ಷಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3-6 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಲಿಖಿತ ಪರೀಕ್ಷೆ)
ಅರ್ಹ ಅಭ್ಯರ್ಥಿಗಳ ಶಾರ್ಟ್ಲಿಸ್ಟ್
ದಾಖಲೆ ಪರಿಶೀಲನೆ
ಸಂದರ್ಶನ
ವೈದ್ಯಕೀಯ ಪರೀಕ್ಷೆ
ಸಂಬಳ:
ಸಹಾಯಕ ಹುದ್ದೆಗಳಿಗೆ – ₹21,000-₹74,000 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ – ₹40000-₹1,40,000
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – ₹500 ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ, ಲಿಂಗತ್ವ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ
• ಅಭ್ಯರ್ಥಿಗಳು IRFC ಅಧಿಕೃತ ಜಾಲತಾಣ https://irfc.co.in/active-jobs ಕ್ಕೆ ಭೇಟಿ ನೀಡಿ.
• ನಂತರ *ಅಡ್ವಟ್. ಸಂಖ್ಯೆ 01/2026* ವಿಭಾಗದ ಕೆಳಗೆ ನೀಡಲಾಗಿಲ್ಲ ಆನ್ಲೈನ್ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
Irfc Assistant And Assistant Manager Online Form 2026
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದ್ದಲ್ಲಿ ನೋಂದಣಿ ಸಂಖ್ಯೆ, ಪಾಸ್ವರ್ಡ್ ಹಾಗೂ ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.