IRFCನಲ್ಲಿ ಸಹಾಯಕ, ಸ.ವ್ಯವಸ್ಥಾಪಕ ಹುದ್ದೆಗಳ ಭರ್ತಿ

ಅರ್ಜಿ ಸಲ್ಲಿಕೆಗೆ ಮೇ 01ರ ಗಡುವು

Published on:

ರೈಲ್ವೆ ಸಚಿವಾಲಯದಡಿ ಬರುವ ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೊರೇಷನ್‌ ಲಿಮಿಟೆಡ್(IRFC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.

ಸಹಾಯಕ(ಎನ್‌ಇ5 ಲೆವೆಲ್‌) 16 ಸ್ಥಾನಗಳು, ಸಹಾಯಕ ವ್ಯವಸ್ಥಾಪಕ/ಫೈನಾನ್ಸ್‌(ಇ1 ಲೆವೆಲ್‌) 07 ಸ್ಥಾನಗಳು ಸೇರಿದಂತೆ ಒಟ್ಟು 23 ಅಭ್ಯರ್ಥಿಗಳನ್ನು ನೇಮಕ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 01ರವರೆಗೆ ಅವಕಾಶವಿದೆ. ಬಿ.ಕಾಂ ಜೊತೆಗೆ ಸಿಎ/ಸಿಎಂಎ, ಎಂಬಿಎ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗಾಗಿ ಐಆರ್‌ಎಫ್‌ಸಿ ಅಧಿಕೃತ ಜಾಲತಾಣ https://irfc.co.in/active-jobsಕ್ಕೆ ಭೇಟಿ ನೀಡಿ.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 04, 2026
  • ಅರ್ಜಿ ಸಲ್ಲಿಸಲು‌ ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 01, 2026

ಶೈಕ್ಷಣಿಕ ಅರ್ಹತೆ:

✓ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಪದವಿ(ಬಿ.ಕಾಂ) ಪೂರ್ಣಗೊಳಿಸಿರಬೇಕು ಹಾಗೂ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ/ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

✓ ಸಹಾಯಕ ವ್ಯವಸ್ಥಾಪಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಪದವಿ(ಬಿ.ಕಾಂ) ಪೂರ್ಣಗೊಳಿಸಿರಬೇಕು ಹಾಗೂ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ/ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ಸಿ.ಎ/ಸಿ.ಎಮ್.ಎ ಅರ್ಹತೆಯನ್ನು ಪಡೆದಿರಬೇಕು. ಅಥವಾ

ಫೈನಾನ್ಸ್ ನಲ್ಲಿ ಎಂಬಿಎ/(ಫೈನಾನ್ಸ್) ಮ್ಯಾನೇಜ್ಮೆಂಟ್ ನಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕನಿಷ್ಠ ಮಿತಿ 18 ವರ್ಷಗಳು
ಗರಿಷ್ಠ ಮಿತಿ 30 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10-15 ವರ್ಷಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3-6 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (ಲಿಖಿತ ಪರೀಕ್ಷೆ)
  • ಅರ್ಹ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
  • ದಾಖಲೆ ಪರಿಶೀಲನೆ
  • ಸಂದರ್ಶನ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಸಹಾಯಕ ಹುದ್ದೆಗಳಿಗೆ – ₹21,000-₹74,000
ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ – ₹40000-₹1,40,000

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – ₹500
ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ, ಲಿಂಗತ್ವ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ‌ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ

• ಅಭ್ಯರ್ಥಿಗಳು IRFC ಅಧಿಕೃತ ಜಾಲತಾಣ https://irfc.co.in/active-jobs ಕ್ಕೆ ಭೇಟಿ ನೀಡಿ.

• ನಂತರ *ಅಡ್ವಟ್. ಸಂಖ್ಯೆ 01/2026* ವಿಭಾಗದ ಕೆಳಗೆ ನೀಡಲಾಗಿಲ್ಲ ಆನ್ಲೈನ್ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

Irfc Assistant And Assistant Manager/Finance Notification 2026
Irfc Assistant And Assistant Manager Online Form 2026

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದ್ದಲ್ಲಿ ನೋಂದಣಿ ಸಂಖ್ಯೆ, ಪಾಸ್ವರ್ಡ್ ಹಾಗೂ ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form Link(ಏ.04ರಿಂದ)Apply Now
Official Websiteirfc.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment