ಇಸ್ರೋ: ನಾನಾ ಹುದ್ದೆಗಳ ಭರ್ತಿ; ಅರ್ಹರಿಂದ ಆಹ್ವಾನ

Published on:

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಅಂಗಸಂಸ್ಥೆ ಟೆಲಿಮೆಟ್ರಿಕ್‌ ಟ್ರ್ಯಾಕಿಂಗ್‌ ಅಂಡ್‌ ಕಮಾಂಡ್‌ ನೆಟ್‌ವರ್ಕ್‌(ಇಸ್ಟ್ಯಾಕ್)ನಲ್ಲಿ ಖಾಲಿ ಇರುವ ನಾನಾ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ತಂತ್ರಜ್ಞ, ಡ್ರಾಟ್ಸ್‌ಮನ್, ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ, ಗ್ರಂಥಾಲಯ ಸಹಾಯಕ ಮತ್ತು ಕುಕ್ ಸೇರಿದಂತೆ ಒಟ್ಟು 26 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಜು.20ರೊಳಗೆ ಇಸ್ರೋ ಅಧಿಕೃತ ವೆಬ್ಸೈಟ್ https://www.isro.gov.in/ISTRACRecruitment4.html ಗೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜೂನ್ 27, 2026
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜುಲೈ 20, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜುಲೈ 20, 2026

ಖಾಲಿ ಇರುವ ಹುದ್ದೆಗಳ ವಿವರ:

• ತಂತ್ರಜ್ಞ-ಬಿ 09
• ಡ್ರಾಫ್ಟ್‌ಮನ್-ಬಿ 02
• ತಾಂತ್ರಿಕ ಸಹಾಯಕ 07
• ವೈಜ್ಞಾನಿಕ ಸಹಾಯಕ 05
• ಗ್ರಂಥಾಲಯ ಸಹಾಯಕ-ಎ 01
• ಕುಕ್-ಎ 02

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಹುದ್ದೆಗಳಿಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ/ಎಸ್.ಎಸ್.ಸಿ/ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ/ಡಿಪ್ಲೋಮಾ/ಬಿ.ಎಸ್ಸಿ/ಎಂ.ಎಲ್.ಐ.ಎಸ್ಸಿ ಪದವಿ ಪೂರ್ಣಗೊಳಿಸಬೇಕು.

ವಯೋಮಿತಿ:

20-07-2026 ರಂತೆ;

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು

ವಯೋಮಿತಿ ಸಡಿಲಿಕೆ; ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ/(ಸಿ.ಬಿ.ಟಿ)
  • ಕೌಶಲ್ಯ ಪರೀಕ್ಷೆ

ಸಂಬಳ:

• ತಂತ್ರಜ್ಞ ಮತ್ತು ಡ್ರಾಫ್ಟ್ಸ್‌ಮನ್ ಹುದ್ದೆಗಳಿಗೆ- ರೂ.21,700/-
• ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ ಮತ್ತು ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ- ರೂ. 44,900/-
• ಕುಕ್ ಹುದ್ದೆಗಳಿಗೆ- ರೂ. 19,900/-

ಅರ್ಜಿ ಶುಲ್ಕ:

✓ ತಾಂತ್ರಿಕ ಸಹಾಯಕ/ವೈಜ್ಞಾನಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.750/- (ಮರುಪಾವತಿಸಲಾಗದ ಅರ್ಜಿ ಶುಲ್ಕ ₹250/-)

• ಸಿ.ಬಿ.ಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮರುಪಾವತಿ ಮಾಡಲಾಗುವ ಶುಲ್ಕ ರೂ.500/-

✓ ತಂತ್ರಜ್ಞ-ಬಿ/ಡ್ರಾಫ್ಟ್ಸ್‌ಮನ್-ಬಿ/ಕುಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.500/-(ಮರುಪಾವತಿಸಲಾಗದ ಅರ್ಜಿ ಶುಲ್ಕ ₹100/-)

• ಸಿ.ಬಿ.ಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮರುಪಾವತಿ ಮಾಡಲಾಗುವ ಶುಲ್ಕ ರೂ.400/-

ಆನ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಲಿಂಕ್‌ https://cdn.digialm.com/EForms/configuredHtml/1258/96897/Index.htmlಗೆ ಭೇಟಿ ನೀಡಿ.

Isro Istrac Various Assistant And Draughtsman Notification 2026
ISRO ISTRAC Various Assistant and Draughtsman Online Form 2026

• ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.istrac.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಇಸ್ರೋ: ನಾನಾ ಹುದ್ದೆಗಳ ಭರ್ತಿ; ಅರ್ಹರಿಂದ ಆಹ್ವಾನ”

Leave a Comment