ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 63 ಸೈಂಟಿಸ್ಟ್ ಇಂಜಿನಿಯರ್ ಹುದ್ದೆ(ISRO Scientist Engineer Vacancy 2025)ಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಂಸ್ಥೆಯಲ್ಲಿ (ISRO) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸೈಂಟಿಸ್ಟ್ ಇಂಜಿನಿಯರ್ (ಮೆಕಾನಿಕಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್) ಒಟ್ಟು 63 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ISRO ಅಧಿಕೃತ ವೆಬ್ಸೈಟ್ www.isro.gov.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Indian Space Research Organization (ISRO) Post Name – Scientist/Engineer ‘SC’ Total Vacancy – 63 Application Process – online Job Location – Bangalore
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 29-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -19-05-2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್ ಅಥವಾ ತತ್ಸಮಾನ ಪದವಿಯನ್ನು ಕನಿಷ್ಠ 65% ಅಂಕಗಳೊಂದಿಗೆ (ಎಲ್ಲಾ ಸೆಮಿಸ್ಟರ್‌ಗಳ ಸರಾಸರಿ) ಅಥವಾ 10 ಅಂಕಗಳ ಪ್ರಮಾಣದಲ್ಲಿ ಸಿಜಿಪಿಎ 6.84 ಪಡೆದಿರಬೇಕು. ಜೊತೆಗೆ Gate Score ಹೊಂದಿರಬೇಕು.
ವಯೋಮಿತಿ:
ದಿನಾಂಕ 19-05-2025 ರಂತೆ ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು.
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಆಯ್ಕೆ ಪ್ರಕ್ರಿಯೆ:
ಶಾರ್ಟ್‌ಲಿಸ್ಟ್ ಸಂದರ್ಶನ
ಅರ್ಜಿ ಶುಲ್ಕ:
ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ – 250 ರೂ.
How to Apply for ISRO Scientist Engineer Recruitment 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧಿಕೃತ ವೆಬ್ಸೈಟ್ https://www.isro.gov.in/Careers.html ಗೆ ಭೇಟಿ ನೀಡಿ.
ವೃತ್ತಿಗಳು ವಿಭಾಗದಲ್ಲಿ ಅಡ್ವಟ್.ನಂ.ಇಸ್ರೋ: ಐಸಿಆರ್ ಬಿ:01(ಇಎಂಸಿ):2025 ದಿನಾಂಕ – 29.04.2025 ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ವಿಜ್ಞಾನಿ/ಎಂಜಿನಿಯರ್ ‘ಎಸ್‌ಸಿ’ ಹುದ್ದೆಗೆ ನೇಮಕಾತಿ. ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆನ್ಲೈನ್ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ಅರ್ಜಿ ಶುಲ್ಕ ಪಾವತಿ ಮಾಡಿ.
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.