ITBP Deputy Judge Attorney General Notification 2025
ಭಾರತ ಸರ್ಕಾರದ ಗೃಹ ಸಚಿವಾಲಯದಡಿಯ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯು ಡೆಪ್ಯೂಟಿ ಜಡ್ಜ್ ಅಟಾರ್ನಿ ಜನರಲ್(ಡೆಪ್ಯೂಟಿ ಕಮಾಡೆಂಟ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಡಿ.02ರಿಂದ ಪ್ರಾರಂಭವಾಗಿದೆ.
ಗೆಜೆಟೆಡ್ ಜನರಲ್ ಸೆಂಟ್ರಲ್ ಸರ್ವಿಸ್ ಗ್ರೂಪ್ ‘ಎ’ ಹುದ್ದೆಗಳಿಗೆ ಕಾನೂನು ಪದವೀಧರ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ, ಮುಂದೆ ಖಾಯಂ ಮಾಡುವ ಸಾಧ್ಯತೆ ಇದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಡಿ.31ರೊಳಗೆ ಐಟಿಬಿಪಿ ಅಧಿಕೃತ ಜಾಲತಾಣ https://recruitment.itbpolice.nic.in/rect/index.phpಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 02, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 31, 2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 31, 2025
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಅಥವಾ ತತ್ಸಮಾನ ಪದವಿಯೊಂದಿಗೆ ಕಾನೂನು ಅಭ್ಯಾಸದಲ್ಲಿ 07 ಅಥವಾ 05 ವರ್ಷಗಳ ಅನುಭವದೊಂದಿಗೆ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಹಾಗೂ ವಕೀಲರಾಗಿ ದಾಖಲಾಗಲು ಅರ್ಹತೆಯನ್ನು ಹೊಂದಿರಬೇಕು.
ಅಪೇಕ್ಷಣೀಯ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು ಜೊತೆಗೆಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ವಿಶೇಷ ಕಾನೂನುಗಳ ಅಡಿಯಲ್ಲಿ ವಿಚಾರಣೆಗಳನ್ನು ನಿರ್ವಹಿಸುವಲ್ಲಿ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
31-12-2025 ರಂತೆ;
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ, ಪ.ಪಂಗಡ ಹಾಗೂ ಕೇಂದ್ರ ಸರ್ಕಾರಿ ನೌಕರಿ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 67,700ರೂ. ಗಳಿಂದ 2,08,700ರೂ.ವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
• ದೈಹಿಕ ಪ್ರಮಾಣೀಕರಣ ಪರೀಕ್ಷೆ (PST) • ದೈಹಿಕ ದಕ್ಷತೆ ಪರೀಕ್ಷೆ (PET) • ಲಿಖಿತ ಪರೀಕ್ಷೆ • ದಾಖಲಾತಿ ಪರಿಶೀಲನೆ • ಸಂದರ್ಶನ • ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 400ರೂ. ಪ.ಜಾತಿ, ಪ.ಪಂಗಡ, ಮಾಜಿ ಸೈನಿಕರ ವರ್ಗ ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಐಟಿಬಿಪಿ ಅಧಿಕೃತ ಜಾಲತಾಣ https://recruitment.itbpolice.nic.in/rect/index.php ಕ್ಕೆ ಭೇಟಿ ನೀಡಿ.
• ಬಳಕೆದಾರರ ಇ-ಮೇಲ್ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ನಂತರ “ಡೆಪ್ಯೂಟಿ ಜಡ್ಜ್ ಅಟಾರ್ನಿ ಜನರಲ್ (ಡೆಪ್ಯೂಟಿ ಕಮಾಂಡೆಂಟ್) ಹುದ್ದೆಗೆ ನೇಮಕಾತಿ – 2025” ಅರ್ಜಿ ನಮೂನೆ ಆಯ್ಕೆ ಮಾಡಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಅಭ್ಯರ್ಥಿಯ ವೈಯಕ್ತಿಕ ಮಾಹಿತಿಗಳು, ಶೈಕ್ಷಣಿಕ ವಿವರ, ಅಭ್ಯರ್ಥಿಯ ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.