ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP), ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ನಲ್ಲಿ ಖಾಲಿ ಇರುವ ವಿವಿಧ ವೈದ್ಯಕೀಯ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಐಟಿಬಿಪಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(ITBP Medical Officer Recruitment 2024)ಗೆ ಸಂಬಂಧಪಟ್ಟ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಲೇಖನವನ್ನು ಕೊನೆವರೆಗೆ ಓದಿರಿ.
Shortview of CAPF Medical Officer Notification 2024
Recruitment Name – Indo-Tibetan Border Police Force Organization Name – Central Armed Police Forces (CAPFs) Post Name – Medical Officer Total Vacancy – 345 Application Process: Online Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 14, 2024
ಶೈಕ್ಷಣಿಕ ಅರ್ಹತೆಗಳು:
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBBS ಪದವಿ ಪಡೆದಿರಬೇಕು. ಹಾಗೂ ನಿಗದಿತ ಅನುಭವವಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ- 18 ವರ್ಷದಿಂದ 50 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಹುದ್ದೆಗಳಿಗೆ ಆಧಾರಿತವಾಗಿ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ
ವೈಯಕ್ತಿಕ ಸಂದರ್ಶನ
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹400 SC/ST/EWs/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for ITBP CAPF Medical Officer Recruitment 2024
ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;
ಮೊದಲಿಗೆ ITBP ನ ಅಧಿಕೃತ ವೆಬ್ ಸೈಟ್ recruitment.itbpolice.nic.in ಭೇಟಿ ನೀಡಿ.
ನಂತರ ಮುಖಪುಟದಲ್ಲಿ ಪ್ರಕಟಣೆ ವಿಭಾಗದಲ್ಲಿ CAPF Medical Officer (MO) Recruitment 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
ನಂತರ ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಲಾಗಿನ್ ಮಾಡಿ.
ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮತ್ತು ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಕೊನೆಗೆ ಅರ್ಜಿಯನ್ನು ಸಲ್ಲಿಸಿ