ITBP Sub-Inspector (Hindi Translator) Recruitment 2024: ಭಾರತ ಟಿಬೆಟನ್ ಬಾರ್ಡರ್ ಪೊಲೀಸ್ (ITBP) ಸಂಸ್ಥೆಯು ಸಬ್-ಇನ್ಸ್ ಪೆಕ್ಟರ್ (ಹಿಂದಿ ಅನುವಾದಕ) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ITBP ಸಬ್ ಇನ್ಸ್ಪೆಕ್ಟರ್ ಹಿಂದಿ ಅನುವಾದಕ ಹುದ್ದೆಗಳಿಗೆ ಇಲಾಖೆಯೂ ಈಗಾಗಲೇ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದ್ದು , ಒಟ್ಟು 17 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅದರಲ್ಲಿ ಪುರುಷರಿಗೆ 14 ಮಹಿಳಾ ಅಭ್ಯರ್ಥಿಗಳಿಗೆ 3 ಹುದ್ದೆಗಳನ್ನು ಮೀಸಲಿಡಲಾಗಿದೆ. ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಪಿಜಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಆಗಸ್ಟ್ 26ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಇನ್ನಿತರ ಮಾಹಿತಿಗಳನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of ITBP Sub Inspector (Hindi Translator) Recruitment 2024
Organization Name – Indo-Tibetan Border Police Force
Post Name – Sub-Inspector (Hindi Translator)
Total Vacancy – 17
Application Process: Online
Job Location – All Over India
Important Dates:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಜುಲೈ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಆಗಸ್ಟ್ 2024
ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿ ಮತ್ತು ಇಂಗ್ಲೀಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರಬೇಕು.
- ಭಾಷಾಂತರ ಡಿಪ್ಲೋಮೋ ಕೋರ್ಸ್ ಪಡೆದುಕೊಂಡಿರಬೇಕು ಇದರ ಜೊತೆಗೆ ಕನಿಷ್ಠ ಎರಡು ವರ್ಷಗಳ ಹಿಂದಿ ಭಾಷಾಂತರ ಅನುಭವ ಇರಬೇಕು.
ವಯಸ್ಸಿನ ಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು 21 ವರ್ಷದಿಂದ 30 ವರ್ಷದೊಳಗೆ ವಯಸ್ಸಾಗಿರಬೇಕು.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ₹35,400 ರಿಂದ ₹1,12,400ವರಿಗೆ ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಂತರ ದೈಹಿಕ ಪರೀಕ್ಷೆ ,ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿಗಳ ಪರಿಶೀಲನೆಯನ್ನು ಮಾಡಲಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ – ₹200/-
- SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
How to Apply ITBP SI Hindi Translator Recruitment 2024
- ITBP ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://recruitment.itbpolice.nic.in/
- “ಹೊಸ ಬಳಕೆದಾರ ನೋಂದಣಿ” ಕ್ಲಿಕ್ ಮಾಡಿ.
- ಅಗತ್ಯವಿರುವ ಎಲ್ಲಾ ವಿವರಗಳನ್ನು ಒದಗಿಸಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ನಿಮ್ಮ ನೋಂದಾಯಿತ ಲಾಗಿನ್ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಿ.
- “Online application” ಟ್ಯಾಬ್ ಕ್ಲಿಕ್ ಮಾಡಿ.
- “Sub-inspector(Hindi Translator)” ಲಿಂಕ್ ಅರ್ಜಿ ಆಯ್ಕೆಮಾಡಿ.
- ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
- ನಿಮ್ಮ ಅರ್ಜಿಯನ್ನು ಸಲ್ಲಿಸಿ ಮತ್ತು ಒಂದು ಪ್ರತಿಯನ್ನು ಮುದ್ರಿಸಿ.
Important Direct Links:
Official Full Notification PDF | Download |
Official Short Notification PDF | Download |
Online Application Link | Registration ————— Login |
Official Website | itbpolice.nic.in |
More Updates | Karnataka Help.in |