ITBP Veterinary Staff Recruitment 2024: ಇಂಡೋ-ಟಿಬೆಟನ್ ಗಡಿ ಪೊಲೀಸ್ (ITBP) ಪಶುವೈದ್ಯಕೀಯ ಸಿಬ್ಬಂದಿ(ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್) ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಸಿಲಾಗಿದೆ.
ಈ ಉದ್ಯೋಗಾವಕಾಶಗಳು ಪಶುವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಶು ವೈದ್ಯಕೀಯ ವಿಭಾಗದಲ್ಲಿ ಖಾಲಿ ಇರುವ ಸಿಬ್ಬಂದಿಗಳಿಗಾಗಿ ನೀನೆ ಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ITBP ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸೆಪ್ಟೆಂಬರ್ 10ರ ಒಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿಗೆ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortiew of ITBP Veterinary Staff Notification 2024
Organization Name – Indo-Tibetan Border Police Force Post Name – Head Constable & Constable(Veterinary Staff) Total Vacancy – 128 Application Process: Online Job Location – All Over India
ಮುಖ್ಯ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್ 2024
ಹುದ್ದೆಗಳು ಮತ್ತು ಅರ್ಹತೆ:
ಹೆಡ್ ಕಾನ್ಸ್ಟೆಬಲ್ (ಡ್ರೆಸರ್ ಪಶುವೈದ್ಯಕೀಯ) – ಪಶುವೈದ್ಯಕೀಯ ವಿಜ್ಞಾನದಲ್ಲಿ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕಾನ್ಸ್ಟೆಬಲ್ (ಪ್ರಾಣಿಗಳ ಸಾಗಣೆ) – 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಡ್ರೈವಿಂಗ್ ಪರವಾನಗಿ ಹೊಂದಿರಬೇಕು.
ಕಾನ್ಸ್ಟೆಬಲ್ (ಕೆನ್ನೆಲ್‌ಮ್ಯಾನ್) – 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಪ್ರಾಣಿಗಳ ನಿರ್ವಹಣೆಯಲ್ಲಿ ಅನುಭವ ಹೊಂದಿರಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಗಳು 01.01.2024ಕ್ಕೆ 18 ರಿಂದ 27 ವರ್ಷ ವಯಸ್ಸಿನ ಮಿತಿಯೊಳಗೆ ಇರಬೇಕು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ:
21,700 ರಿಂದ 69,100 ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹100
SC/ST/Ex- Servicemen ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ₹00 (ಯಾವುದೇ ಅರ್ಜಿ ಶುಲ್ಕವಿಲ್ಲ)