ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ 2024-2025ನೇ ಸಾಲಿಗೆ ಧಾರ್ಮಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ಪದವಿ ಪೂರ್ವ ಹಾಗೂ ಪದವಿ ನಂತರದ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ 5 ಸಾವಿರರೂ. ಗಳಿಂದ 1 ಲಕ್ಷರೂ.ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಸದರಿ ವಿದ್ಯಾರ್ಥಿವೇತನದ ಅರ್ಹತಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಡಿಸೆಂಬರ್ 31ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ನವೆಂಬರ್ 21, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 31, 2025
ವಿದ್ಯಾರ್ಥಿವೇತನದ ವಿವರಗಳು:
• ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 5,000ರೂ.
• ಐ.ಟಿ.ಐ/ಜೆ.ಒ.ಸಿ/ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 5,000ರೂ.
• ಪದವಿ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 7,000ರೂ.
• ಸ್ನಾತ್ತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 15,000ರೂ.
• ವೈದ್ಯಕೀಯ (ಆಯುವೇದಿಕ್, ಹೋಮಿಯೋಪತಿ ಮತ್ತು ಯುನಾನಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 25,000ರೂ.
• ತಾಂತ್ರಿಕ ಶಿಕ್ಷಣ (ಇಂಜಿನಿಯರಿಂಗ್) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 25,000ರೂ.
• ವೈದ್ಯಕೀಯ /ಡೆಂಟಲ್ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 50,000ರೂ.
• ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ – 1,00,000ರೂ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
• ವಿದ್ಯಾರ್ಥಿಗಳು 2024-2025ನೇ ಸಾಲಿನಲ್ಲಿ ಪದವಿ ಪೂರ್ವ ಹಾಗೂ ಪದವಿ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿವೇತನದ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯಧಾರ್ಮಿಕ ದತ್ತಿ ಆಯುಕ್ತರ ಕಚೇರಿ ಅಥವಾ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ತಾಲ್ಲೂಕು ತಹಶಿಲ್ದಾರ್ ರವರ ಕಚೇರಿಯಲ್ಲಿ ಪಡೆದು.
ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರಗಳನ್ನು ನಮೂದಿಸಿ, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ. ಡಿಸೆಂಬರ್ 31ರೊಳಗೆ ಆಯಾ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಅರ್ಜಿದಾರರು ಆಯಾ ಜಿಲ್ಲೆಯಧಾರ್ಮಿಕ ದತ್ತಿ ಆಯುಕ್ತರ ಕಚೇರಿ/ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ /ತಾಲ್ಲೂಕು ತಹಶಿಲ್ದಾರ್ ರವರ ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು.