WhatsApp Channel Join Now
Telegram Group Join Now

Journalism Training Opportunity: ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

Journalism Training Opportunity 2024: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ  ಪಡೆಯಲು ಅರ್ಜಿ ಆಹ್ವಾನಿಸಿದೆ.

ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ ತರಬೇತಿ ನೀಡಲಾಗುವುದು.

Journalism Training Opportunity
Journalism Training Opportunity

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕಳೆದ ನೀಡಲಾಗಿದ್ದು ಗಮನವಿಟ್ಟು ಓದಿರಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 26, 2024

ವಿದ್ಯಾರ್ಹತೆ;

ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿ ಪಡೆದುಕೊಂಡಿರಬೇಕು.

ವಯೋಮಿತಿ:

ಈ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 28 ವರ್ಷದ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

ಅಂಕಗಳ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಿ, ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಪರೀಕ್ಷೆಯಲ್ಲಿ ಅಂಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯನ್ನು ಮಾಡಲಾಗುತ್ತದೆ.

ವೇತನ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಸಮಯದಲ್ಲಿ 20,000 ಮಾಸಿಕ ವೇತನ ನೀಡಲಾಗುತ್ತದೆ.

Also Read: Career After MA Journalism: ಎಂಎ ಪತ್ರಿಕೋದ್ಯಮ, ಅವಕಾಶಗಳ ಭಂಡಾರ!

How to apply for Journalism Training For Women Karnataka 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು.

Important Direct Links:

Online Apply Email Linkkarnatakamediaacademy@gmail.com
More UpdatesKarnataka Help.in

Leave a Comment