KACDC Arivu Education Loan: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳು, ಪ್ರಮುಖ ದಿನಾಂಕಗಳೂ ಹಾಗೂ ಇತರೆ ಸಂಪೂರ್ಣ ಮಾಹಿತಿ ಇಲ್ಲಿದೆ.

Published on:

ಫಾಲೋ ಮಾಡಿ
KACDC Arivu Education Loan 2025 Online Form
KACDC Arivu Education Loan 2025 Online Form

2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯಲು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KACDC ಅಧಿಕೃತ ವೆಬ್ಸೈಟ್ https://kacdc.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಆಗಸ್ಟ್ 1, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2025

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment