2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯಲು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KACDC ಅಧಿಕೃತ ವೆಬ್ಸೈಟ್ https://kacdc.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಆಗಸ್ಟ್ 1, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು.
ಅರ್ಜಿದಾರರಿಗೆ ಇರಬೇಕಾದ ಸಾಮಾನ್ಯ ಅರ್ಹತೆಗಳು:
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು).
- ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
- ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
- ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33% ಹಾಗೂ ವಿಕಲಚೇತನರಿಗೆ ಶೇ.5% ಮೀಸಲಾತಿ ಇರಿಸಿದೆ.
- ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ವಯೋಮಿತಿ:
- ಕನಿಷ್ಠ ಮಿತಿ – 18 ವರ್ಷಗಳು
- ಗರಿಷ್ಠ ಮಿತಿ – 35 ವರ್ಷಗಳು
ಸಾಲ ಸೌಲಭ್ಯದ ವಿವರ:
ಅರ್ಜಿದಾರರಿಗೆ 1 ಲಕ್ಷ ರೂ.ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.
ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕು.
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು
- ಸಿ.ಇ.ಟಿ ಪ್ರವೇಶ ಸಂಖ್ಯೆ ಪ್ರತಿ.
- ಕಳೆದ ವರ್ಷದ ಅಂಕಪಟ್ಟಿ
- ಪ್ರಸ್ತುತ ಸಾಲಿನ ವ್ಯಾಸಂಗ ಪ್ರಮಾಣ ಪತ್ರ(ಪ್ರಾಂಶುಪಾಲರು ದೃಢೀಕರಿಸಿದ)
- ಪೂರ್ಣ ವ್ಯಾಸಂಗದ ಫೀ ಸ್ಟ್ರಕ್ಚರ್ ಪ್ರತಿ(ಪ್ರಾಂಶುಪಾಲರು ದೃಢೀಕರಿಸಿದ)
- ಕಾಲೇಜಿನಲ್ಲಿಯೇ ಹಾಸ್ಟೆಲ್ ಸೌಲಭ್ಯ ಪಡೆದಿದ್ದಲ್ಲಿ ಪ್ರಾಂಶುಪಾಲರು ಅಥವಾ ಹಾಸ್ಟೆಲ್ ವಾರ್ಡನ್ ರವರಿಂದ ದೃಢೀಕರಣ ಪ್ರತಿ
How to Apply for KACDC Arivu Education Loan 2025?
ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;
- KACDC ಅಧಿಕೃತ ವೆಬ್ಸೈಟ್ https://kacdc.karnataka.gov.in/ಗೆ ಭೇಟಿ ನೀಡಿ.
- ಅಪ್ಲೈ ಆನ್ಲೈನ್ ವಿಭಾಗವನ್ನು ಆಯ್ಕೆ ಮಾಡಿ.
- *ಅರಿವು ಶೈಕ್ಷಣಿಕ ಸಾಲ* ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ click to proceed ಆಯ್ಕೆ ಮಾಡಿ
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ನಿಗಮದ ಸಹಾಯವಾಣಿ ಸಂಖ್ಯೆ 9448451111ಗೆ ಸಂಪರ್ಕಿಸಬಹುದು.
Important Direct Links:
| KACDC Arivu Education Loan 2025 Online Apply Link | Apply Now |
| Official Website | aryavysya.karnataka.gov.in |
| More Updates | KarnatakaHelp.in |
Please help me