ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧನಸಹಾಯ, ಅರ್ಜಿ ಆಹ್ವಾನ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಮತ್ತು ಕಲಾವಿದರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ವಿವಿಧ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ, ಕಲಾವಿದರಿಗೆ ಹಾಗೂ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲಾಗುತ್ತದೆ. ಸದರಿ ಯೋಜನೆಯಡಿ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ನೋಂದಾಯಿತ ಕಲಾವಿದರು ಡಿ.30ರೊಳಗೆ ಸೇವಾ ಸಿಂಧು ಅಧಿಕೃತ ಜಾಲತಾಣ https://sevasindhu.karnataka.gov.in/Sevasindhu/Kannada?ReturnUrl=%2F ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಸದರಿ ಯೋಜನೆಯಡಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ- ಸಂಸ್ಥೆಗಳು ಹಾಗೂ ಕಲಾವಿದರು ಅರ್ಜಿ ಸಲ್ಲಿಸಬಹುದು.
ಸಹಾಯಧನದ ವಿವರಗಳು:
• ನಾಡಿನ ಕಲಾ ಪ್ರಕಾರಗಳನ್ನು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಉಳಿಸಿ ಬೆಳೆಸಲು ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನ ನೀಡಲಾಗುತ್ತದೆ.
• ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ನೀಡಲಾಗುತ್ತದೆ.
• ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಕಲಾವಿದರಿಗೆ ಸಹಾಯಧನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಅರ್ಜಿಗಳನ್ನು ಪರಿಶೀಲಿಸಿ, ಯೋಜನೆ ಮತ್ತು ಸಂಸ್ಥೆಯ ಕಾರ್ಯಕ್ಷಮತೆಯ ಆಧಾರದ ಮೇಲೆ ಸಹಾಯಧನ ಮಂಜೂರಾತಿ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ಸದರಿ ಯೋಜನೆಯ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಕಲಾವಿದರು ಮೊದಲಿಗೆ ಸೇವಾ ಸಿಂಧು ಅಧಿಕೃತ ಜಾಲತಾಣ https://sevasindhu.karnataka.gov.in/Sevasindhu/Kannada?ReturnUrl=%2F ಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಇಮೇಲ್ ಐಡಿ/ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ನಮೂದಿಸಿ ಲಾಗಿನ್ ಆಗಿ.
• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.
• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ-ವಿವರಗಳು ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ದೂ.ಸಂಖ್ಯೆ 08024410547,08022241325, 08022213530 / ಮೊ.ಸಂಖ್ಯೆ 8792662814, 8792662816, 9986837037, 9900337738, 9448436877, 9480197511, 9916600027 ಅನ್ನು ಸಂಪರ್ಕಿಸಬಹುದು. ಅಥವಾ
ಕಲಾವಿದರು ಆಯಾ ಜಿಲ್ಲೆಯ “ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ಮತ್ತು ಆಯಾ ಜಿಲ್ಲೆಯ ಸೇವಾಸಿಂಧು ವ್ಯವಸ್ಥಾಪಕರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
.