Karnataka TET Hall Ticket 2024: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ KARTET 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಏಪ್ರಿಲ್ 15 ರಿಂದ ಮೇ 15ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಹಾಗೂ ಪರೀಕ್ಷೆಯನ್ನ ಜೂನ್ 30, 2024ರಂದು ನಿಗದಿಪಡಿಸಲಾಗಿತ್ತು. ಇದೀಗ ಇಲಾಖೆಯಾ ಅಧಿಕೃತ ವೆಬ್ ಸೈಟ್ ನಲ್ಲಿ ಈ ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದೆ.
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಭರ್ತಿ ಮಾಡುವ ಮೂಲಕ ತಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದ ನೇರ ಲಿಂಕ್ ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ..