2nd PUC Exam 2 Time Table 2025(OUT) ಪರೀಕ್ಷೆ ವೇಳಾಪಟ್ಟಿ ಪ್ರಕಟ, ತಿಳಿಯಿರಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

Karnataka 2nd PUC Exam 2 Time Table 2025
Karnataka 2nd PUC Exam-2 Time Table 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಬಳಿಕ ಪರೀಕ್ಷೆ- 2 ರ ವೇಳಾಪಟ್ಟಿ(Karnataka 2nd PUC Exam 2 Time Table 2025)ಯನ್ನು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಅನ್ನು ಏಪ್ರಿಲ್ 8 ರಂದು ಮಧ್ಯಾಹ್ನ 12:30 ಕ್ಕೆ ಮಂಡಳಿಯ ಅಧಿಕೃತ ವೆಬ್‌ ಸೈಟ್ karresults.nic.in ನಲ್ಲಿ ಪ್ರಕಟಿಸಲಾಗಿತ್ತು. 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ದ್ವಿತೀಯ ಪಿಯುಸಿ ಪರೀಕ್ಷೆ – 1 ರಲ್ಲಿ ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಮಂಡಳಿಯೂ ಇದೀಗ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಜೂ.9ರಿಂದ 21ರವರೆಗೆ ಪರೀಕ್ಷೆ- 3 ನಡೆಯಲಿದ್ದು, ಮುಂದಿನ ದಿನಗಳಲ್ಲಿ ಮೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಪರೀಕ್ಷೆಯ ವೇಳಾಪಟ್ಟಿ ಹಾಗೂ ಇತರೆ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Karnataka 2nd PUC Examination-2 2025

ಏಪ್ರಿಲ್ 24 ರಿಂದ ಮೇ 8 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಸಲಾಗುತ್ತದೆ. ಈ ಕುರಿತಂತೆ ವಿಷಯವಾರು ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು. ಈ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ನಿರ್ದಿಷ್ಟ ವಿಷಯ ಅಥವಾ ಎಲ್ಲ ವಿಷಯಗಳಿಗೂ ಮತ್ತೆ ಪರೀಕ್ಷೆ ಬರೆದರು ಯಾವುದೇ ವಿದ್ಯಾರ್ಥಿ ಪರೀಕ್ಷಾ ಶುಲ್ಕ ಪಾವತಿಸುವಂತಿಲ್ಲ, ಫ್ರೆಷೆರ್ಸ್ ಗಳಿಗೆ ಉಚಿತ ನೋಂದಣಿ (2nd PUC Exam 2 2025 Registration) ಮಾಡಲಾಗುತ್ತದೆ. ಪುನರಾವರ್ತಿತ ವಿದ್ಯಾರ್ಥಿಗಳಿಗೆ ನಿಗದಿತ ಶುಲ್ಕ ವಿಧಿಸಲಾಗುತ್ತದೆ ಎಂದು ತಿಳಿಸಿಸಲಾಗಿದೆ.

2nd PUC Exam 2 Time Table 2025 (Exam Dates)

ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿಯು ಈ ಕೆಳಗಿನಂತಿದೆ;

ದಿನಾಂಕಗಳುವಿಷಯಗಳು
24 – 04 -2025 ಕನ್ನಡ, ಅರೇಬಿಕ್
25 – 04 -2025 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಜೀವಶಾಸ್ತ್ರ
26 – 04 -2025 ಇತಿಹಾಸ, ಭೌತಶಾಸ್ತ್ರ
28 – 04 -2025 ಭೂಗೋಳಶಾಸ್ತ್ರ, ಮನಃ ಶಾಸ್ತ್ರ, ರಾಸಾಯನಶಾಸ್ತ್ರ, ಮೂಲಗಣಿತ
29 – 04 -2025 ಇಂಗ್ಲೀಷ್
02 – 05 -2025 ತರ್ಕಶಾಸ್ತ್ರ ವ್ಯವಹಾರ ಅಧ್ಯ ಯನ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
03 – 05 -2025 ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
05 – 05 -2025 ಅರ್ಥಶಾಸ್ತ್ರ
06 – 05 -2025 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
07 – 05 -2025 ಹಿಂದಿ
08 – 05 -2025 ತಮಿಳು, ತೆಲುಗು, ಉರ್ದು, ಮಲಯಾಳಂ, ಮರಾಠಿ, ಸಂಸ್ಕೃತ, ಫ್ರೆಂಚ್, ಎನ್‌ಎಸ್‌ಕ್ಯೂಎಫ್‌ ವಿಷಯಗಳು

Important Direct Links:

Karnataka 2nd PUC Exam-2 Time Table 2025 PDFDownload
Official Websitekseab.karnataka.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment