ನೀವು ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಜೀವವೈವಿಧ್ಯ ಮಂಡಳಿಯು (Karnataka Biodiversity Board) ಅಧಿಕೃತ ಅಧಿಸೂಚನೆಯ ಮೂಲಕ ಕಾಲಿಯಿರುವ ವಕೀಲರ ಹುದ್ದೆಗಳನ್ನು ಭರ್ತಿ ಮಾಡಿಕೋಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ವಕೀಲಿ ವೃತ್ತಿಯನ್ನು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಅರ್ಜಿಯನ್ನು ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು (ಅಧಿಸೂಚನೆಯ ಲಿಂಕ್ಅನ್ನು ಕೆಳಗೆ ನೀಡಲಾಗಿದೆ) ಅಕ್ಟೋಬರ್ 25 ರ ಒಳಗೆ ಆಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನು ಪದವಿ, ಎಲ್ಎಲ್ಬಿ ಪೂರ್ಣಗೊಳಿಸಿರುವುದು ಅವಶ್ಯಕವಾಗಿದೆ.
ವಯೋಮಿತಿ:
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯ ಕುರಿತಾಗಿ ಸ್ಪಷ್ಟನೆ ನೀಡಿರುವುದಿಲ್ಲ. ಮೊಕದ್ದಮೆ ನಡೆಸಿದ ಅನುಭವ ಹಾಗೂ ವಕೀಲಿ ವೃತ್ತಿಯನ್ನು ನಡೆಸುತ್ತಿರುವ ಆಸಕ್ತರಿಗೂ ಅರ್ಜಿ ಸಲ್ಲಿಸಲು ಅವಕಾಶವಿರುವುದರಿಂದ ವಯೋಮಿತಿಯಲ್ಲಿ ಕೆಲ ಸಡಿಲಿಕೆಗಳು ಇರುತ್ತವೆ. ಕೊನೆಗೆ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು.
ಆಯ್ಕೆ ವಿಧಾನ:
ಸಂದರ್ಶನ
ದಾಖಲೆ ಪರಿಶೀಲನೆ
ಅಂತಿಮ ಆಯ್ಕೆ
ಅರ್ಜಿ ಸಲ್ಲಿಸುವ ವಿಳಾಸ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ – ಸದಸ್ಯ ಕಾರ್ಯದರ್ಶಿ, ಕರ್ನಾಟಕ ಜೀವವೈವಿಧ್ಯ ಮಂಡಳಿ, ವನವಿಕಾಸ್, ನೆಲ ಮಹಡಿ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ 24-ಅಕ್ಟೋಬರ್-2025 ರ ಮೊದಲು ತಲುಪುವಂತೆ ಅರ್ಜಿಯನ್ನು ಕಳುಹಿಸಬೇಕು.
ಅರ್ಜಿ ಶುಲ್ಕ:
ವಕೀಲರ ಪರಿಷತ್ತಿನಲ್ಲಿ ನೋಂದಾಯಿಸದ ಅಭ್ಯರ್ಥಿಗಳು ಮಂಡಳಿಯ ಮಾನದಂಡಗಳಂತೆ ಶುಲ್ಕ ಪಾವತಿಸಬೇಕು. ನೋಂದಾಯಿತ ವಕೀಲರಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:
ಬಾರ್ ಕೌನ್ಸಿಲ್ನಲ್ಲಿ ನೋಂದಣಿ ಪ್ರಮಾಣಪತ್ರ.
ಬಾರ್ ಅಸೋಸಿಯೇಷನ್ / ಬಾರ್ ಕೌನ್ಸಿಲ್ ನೀಡಿದ ಗುರುತಿನ ಚೀಟಿ.
ಇತರ ಮಂಡಳಿಗಳು, ನಿಗಮಗಳು, ಸರ್ಕಾರಿ ಇಲಾಖೆಗಳು ಅಥವಾ ಸಂಸ್ಥೆಗಳೊಂದಿಗೆ ಕೆಲಸ ಮಾಡಿದ ಅನುಭವದ ದಾಖಲೆಗಳು ಯಾವುದಾದರೂ ಇದ್ದರೆ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ:
ಮೊದಲನೆಯದಾಗಿ ಕರ್ನಾಟಕ ಜೀವವೈವಿಧ್ಯ ಮಂಡಳಿ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮಗೆ ಅನ್ವಯಿಸಿದರೆ ಅರ್ಜಿ ಶುಲ್ಕ ಪಾವತಿ ಮಾಡಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ – ಸದಸ್ಯ ಕಾರ್ಯದರ್ಶಿ, ಕರ್ನಾಟಕ ಜೀವವೈವಿಧ್ಯ ಮಂಡಳಿ, ವನವಿಕಾಸ್, ನೆಲ ಮಹಡಿ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-560003 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) 24-ಅಕ್ಟೋಬರ್-2025 ರ ಮೊದಲು ತಲುಪುವಂತೆ ಅರ್ಜಿಯನ್ನು ಕಳುಹಿಸಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.