ಇನ್ನೂ ಮುಂದೆ ಪರೀಕ್ಷಾ ಪದ್ದತಿಯೇ ಬದಲು‌‌…! ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ನಡೆಸುತ್ತಿರುವ ಪ್ರತಿಯೊಬ್ಬರೂ ಇದನ್ನು ಮಿಸ್ ಮಾಡದೇ ಓದಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ನಾಗರಿಕ ಸೇವಾ ನೇರ ನೇಮಕಾತಿಗೆ ಸಂಬಂಧಿಸಿದ ನಿಯಮಗಳಲ್ಲಿ ತಿದ್ದುಪಡಿಯನ್ನು ತಂದಿದೆ. ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳ ಗಮನಕ್ಕೆ ಈ ತಿದ್ದುಪಡಿಯು ಬಹು ಮುಖ್ಯ ಅಂಶವಾಗಿದೆ. ಇನ್ನು ಮುಂದೆ ರಾಜ್ಯದಲ್ಲಿನ ಸಂದರ್ಶನ ಇರುವ & ಇಲ್ಲದಿರುವ ಗ್ರೂಪ್-A & B ಹುದ್ದೆಗಳ ನೇಮಕಾತಿಯ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಈ ಲೇಖನದಲ್ಲಿ ರಾಜ್ಯ ಸರ್ಕಾರವು ತಂದಿರುವ ನೇಮಕಾತಿಯ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗಿದ್ದು, ನೀವು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಈ ಲೇಖನವನ್ನು ಗಮನವಿಟ್ಟು ಸಂಪೂರ್ಣವಾಗಿ ಓದಿರಿ.

ವಿವಿಧ ನೇಮಕಾತಿಯಲ್ಲಿ ಸಂದರ್ಶನವಿರುವ Group A&B ಹುದ್ದೆಗಳಿಗೆ ಸಂಬಂಧಿಸಿದಂತೆ MCQ ಅಂದರೆ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ‘ವಿವರಣಾತ್ಮಕ’ (Descriptive) ಸ್ವರೂಪದಲ್ಲಿರಲಿದೆ.

ಸಂದರ್ಶನವಿಲ್ಲದ Group- A & B ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಸ್ವರೂಪದಲ್ಲಿ (Objective MCQ)‌ ಇರಲಿದ್ದು. ಪ್ರತಿಯೊಂದು ಪ್ರಶ್ನೆಯು ಋಣಾತ್ಮಕ ಅಂಕವನ್ನು ಒಳಗೊಂಡಿರತಕ್ಕದ್ದು ಮತ್ತು ಅಂಥ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು (1/4) ಅಂಕಗಳನ್ನು ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಕಡಿತಗೊಳಿಸಲಾಗುತ್ತದೆ ಎಂದು ಸರ್ಕಾರವು ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಲಾಗಿದೆ.

Important Direct Links:

Karnataka Rajya Patra PDFDownload
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment