ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2024 ರ ಕರ್ನಾಟಕ ಡಿಪ್ಲೊಮಾ ಕಾಲೇಜ್ ಆಫ್ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ (DCET) ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಜೂನ್ 22, 2024 ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ, ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಪರೀಕ್ಷಾ ಶುಲ್ಕ ಪಾವತಿಸಿ ನೊಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅಧಿಕೃತ ವೆಬ್ ಸೈಟಿನಲ್ಲಿ ನೋಂದಣಿ ಸಂಖ್ಯೆ ಮತ್ತು ಅಭ್ಯರ್ಥಿಗಳ ಹೆಸರಿನ ಮೊದಲ 4 ಅಕ್ಷರಗಳನ್ನು ನಮೂದಿಸುವ ಮೂಲಕ ಪ್ರವೇಶ ಪತ್ರದ PDF ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಪಕ್ಷ ಪ್ರಾಧಿಕಾರವು ಪ್ರಕಾಟನೆಯ ಮೂಲಕ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಪ್ರವೇಶ ಪತ್ರದ ಜೊತೆಗೆ ಪ್ರಕಟಿಸಲಾಗಿರುವ ವಸ್ತ್ರ ಸಂಹಿತೆ ಮತ್ತು ಪರೀಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಯುಕ್ತ ಪ್ರಾಧಿಕಾರವು ಸೂಚಿಸಲಾಗಿದೆ. ಈ ಲೇಖನದಲ್ಲಿ ನಾವು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗಿದೆ.