ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಾತ್ಕಾಲಿಕ ಮೆರಿಟ್ ಪಟ್ಟಿಯ PDF ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯು 2024-25 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು, ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ತಾತ್ಕಾಲಿಕ ಮೆರಿಟ್ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು , ಅರ್ಜಿ ಸಂಖ್ಯೆ, ಸ್ನಾತಕೋತ್ತರ ಪದವಿಯಲ್ಲಿ ಗಳಿಸಿದ ಅಂಕಗಳು ಮತ್ತು ಇನ್ನಿತರ ಅಂಶಗಳನ್ನು ನೀಡಲಾಗಿದ್ದು, ಎಲ್ಲವನ್ನು ಒಟ್ಟುಗೂಡಿಸಿ ಮೆರಿಟ್ ಸಂಖ್ಯೆಯನ್ನು ನೀಡಲಾಗಿದೆ. ಈ ಪಟ್ಟಿ ತಾತ್ಕಾಲಿಕವಾಗಿದ್ದು, ಇಲಾಖೆಯಿಂದ ಮತ್ತೊಂದು ಅಂತಿಮ ಪಟ್ಟಿ ಬಿಡುಗಡೆ ಆಗುತ್ತದೆ. ಮೆರಿಟ್ ಪಟ್ಟಿಯಲ್ಲಿ ಹೆಸರು ಬಂದಿರುವ ಅಭ್ಯರ್ಥಿಗಳು ಕೌನ್ಸಿಲಿಂಗ್ ನಡೆಯು ದಿನಾಂಕದಂದು ಎಲ್ಲಾ ಮೂಲ ದಾಖಲಾತಿಯೊಂದಿಗೆ ಹಾಜರಾಗಬೇಕು.