ಬೆಂಗಳೂರಿನ ಉಚ್ಚ ನ್ಯಾಯಾಲಯ(ಹೈಕೋರ್ಟ್) ಕಲ್ಯಾಣ ಕರ್ನಾಟಕ ಹಾಗೂ ಮೂಲ ಉಳಿಕೆ ವೃಂದದ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ವೃಂದ 04 + 07 ಬ್ಯಾಕ್ಲಾಗ್ ಸ್ಥಾನ, ಮೂಲ ಉಳಿಕೆ ವೃಂದ(RPC) 53 +06 ಬ್ಯಾಕ್ಲಾಗ್ ಸ್ಥಾನ ಸೇರಿದಂತೆ ಒಟ್ಟು 70 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 15ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ಜಾಲತಾಣ https://judiciary.karnataka.gov.in/recsubnotify.php?p=1149&stateNM=ಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 15, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ಪದವಿ (ವಿಜ್ಞಾನ/ಕಲೆ/ವಾಣಿಜ್ಯ/ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್/ ವ್ಯವಹಾರ ಆಡಳಿತ/ತತ್ಸಮಾನ ಪರೀಕ್ಷೆ)ಯಲ್ಲಿ ಉತ್ತೀರ್ಣರಾಗಿರಬೇಕು.
ಮತ್ತು
ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ/ಆಂಗ್ಲ ಶೀಘ್ರಲಿಪಿ ಪ್ರೋಫಿಶಿಯನ್ಸಿ ಮತ್ತು ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆ/ಆಂಗ್ಲ ಕಮರ್ಷಿಯಲ್ ಪ್ರಾಕ್ಟಿಸ್ /ಸೆಕ್ರೆಟೇರಿಯಲ್ ಪ್ರಾಕ್ಟಿಸ್ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ (ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣಪತ್ರ) ವನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ಮಿತಿ 18 ವರ್ಷಗಳು
ಗರಿಷ್ಠ ಮಿತಿ; ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು, ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು, ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳು
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ಶೀಘ್ರಲಿಪಿ ಪರೀಕ್ಷೆ
ಸಂದರ್ಶನ
ಅಂತಿಮ ಆಯ್ಕೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹೈಕೋರ್ಟ್ ನಿಯಮಗಳ ಅನುಸಾರ ಮಾಹೆಯಾನ ₹44,900 ಗಳಿಂದ ₹1,42,400ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ₹500 ಪ.ಜಾತಿ, ಪ.ಪಂಗಡ, ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ₹250
ಅರ್ಜಿ ಸಲ್ಲಿಕೆ ವಿಧಾನ
• ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ಅಧಿಕೃತ ಜಾಲತಾಣ https://judiciary.karnataka.gov.in/recsubnotify.php?p=1149&stateNM= ಕ್ಕೆ ಭೇಟಿ ನೀಡಿ.
• *ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗೆ ನೇಮಕಾತಿಗಾಗಿ* ಶೀರ್ಷಿಕೆ ಕೆಳಗೆ ನೀಡಲಾಗಿರುವ “ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಆಯ್ಕೆಯನ್ನು ಆರಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.