Karnataka Lokayukta Recruitment 2024: ಲೋಕಾಯುಕ್ತ ಇಲಾಖೆಯಲ್ಲಿ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

Follow Us:

ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(Karnataka Lokayukta Recruitment 2024)ಗೆ ಸಂಬಂದಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಮುಂತಾದ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ. ನಿಮ್ಮ ಸ್ನೇಹಿತರಿಗೂ ತಪ್ಪದೇ ಶೇರ್ ಮಾಡಿ.

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 30-10-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 29-11-2024

ಖಾಲಿ ಹುದ್ದೆಗಳ ವಿವರ:

  • RPC – 16 ಹುದ್ದೆಗಳು
  • KKR – 14 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಲೋಕಾಯುಕ್ತ ಇಲಾಖೆಯು ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ PUC(12th) ವಿದ್ಯಾರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ:

ಕನಿಷ್ಠ – 18 ವರ್ಷ

ಗರಿಷ್ಠ-

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 38 ವರ್ಷ
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 41ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷ

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಲಿಸ್ಟ್ (PUCಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ)
  • ಅರ್ಹತಾ ಪರೀಕ್ಷೆ(ಬೆರಳಚ್ಚು ಯಂತ್ರ / ಗಣಕಯಂತ್ರದ ಮೂಲಕ)
  • ದಾಖಲಾತಿ ಪರಿಶೀಲನೆ

ಸಂಬಳ:

ವೇತನ ಶ್ರೇಣಿ- 34100-800-35700-900-39300-1000-43300-1125-47800-1250- 52800-1375-58300-1500-64300-1650-67600

ಅರ್ಜಿ ಶುಲ್ಕ:

  • ಸಾಮಾನ್ಯ ಅರ್ಹತೆ, ಪ್ರವರ್ಗ-2(ಎ), 2(ಬಿ), 3(ಎ), 3(ಬಿ) ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ.250/-
  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

How to Apply for Karnataka Lokayukta Clerk Recruitment 2024 

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ;

  • ಮೊದಲು ಅಧಿಕೃತ ಜಾಲತಾಣ {https://lokayukta.karnataka.gov.in/)ಕ್ಕೆ ಭೇಟಿ ನೀಡಿ.
  • ನಂತರ ಅಲ್ಲಿ ಕಾಣುವ ” Notification of the Recruitment to the post Clerk-cum-Typist(RPC/KKR)” ಮೇಲೆ ಕ್ಲಿಕ್ ಮುಂದೆ “Online Application” ಕ್ಲಿಕ್ ಮಾಡಿ.
  • ಮುಂದೆ ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ ಹಾಗೂ ಅರ್ಜಿ ಸಲ್ಲಿಸಿ

Important Direct Links:

Official Notification (RPC)Download
Official Notification (KKR)Download
Online Application Form (RPC) LinkApply Here
Online Application Form (KKR) LinkApply Here
More UpdatesKarnataka Help.in

Leave a Comment