ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್; ಅರ್ಜಿ ಆಹ್ವಾನ

Published on:

ಬೆಂಗಳೂರು ಅ.06: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಮಹಿಳಾ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ಗಾಗಿ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರವಣಿಗೆಯಲ್ಲಿ ಪರಿಣತಿ ಹೊಂದಿದ್ದು, 2022-23, 2023-24, 2024-2025 ಹಾಗೂ 2025-2026ನೇ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 20 ಅಭ್ಯರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ ಒದಗಿಸಲಾಗುವುದು.‌ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್‌ ಅವಕಾಶ ಕಲ್ಪಿಸಲಾಗುವುದು ಜೊತೆಗೆ ಮಾಸಿಕ ನಿಗದಿತ ಸ್ಟೈಪೆಂಡ್‌(ಶಿಷ್ಯವೇತನ) ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅ.23ರೊಳಗೆ ಗೂಗಲ್‌ ಫಾರ್ಮ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಅರ್ಜಿ ಸಲ್ಲಿಕೆ ಹೀಗೆ…

ಅಭ್ಯರ್ಥಿಗಳು ತಮ್ಮ ಸ್ವವಿವರ(Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://docs.google.com/forms/d/e/1FAIpQLSfYwla-tbEhbvzUmRvWdsOCn44knMZ7orPgzExhxJsmUxIxlQ/viewform
ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಆಗಿರುತ್ತದೆ ಅವರು ಸೂಚಿಸಿದ್ದಾರೆ.

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment